Text copied!
Bibles in Kannada

ಕೀರ್ತ 22:6-11 in Kannada

Help us?

ಕೀರ್ತ 22:6-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ.
7 ನನ್ನನ್ನು ನೋಡುವವರೆಲ್ಲರೂ ಹಾಸ್ಯಮಾಡುತ್ತಾರೆ; ಅವರು ಓರೇ ತುಟಿ ಮಾಡಿ ತಲೆ ಆಡಿಸುತ್ತಾ,
8 “ಯೆಹೋವನು ತನ್ನನ್ನು ರಕ್ಷಿಸುವನೆಂದು ಆತನಲ್ಲಿ ಭರವಸವಿಟ್ಟಿದ್ದಾನಲ್ಲಾ; ಆತನು ಇವನನ್ನು ಮೆಚ್ಚಿದ್ದಾದರೆ ರಕ್ಷಿಸಲಿ” ಎಂದು ಹೇಳುತ್ತಾರೆ.
9 ತಾಯಿಯ ಗರ್ಭದೊಳಗಿಂದ ನನ್ನನ್ನು ಬರಮಾಡಿದವನು ನೀನೇ ಅಲ್ಲವೇ. ತಾಯಿಯ ಎದೆಯಲ್ಲಿ ನನ್ನನ್ನು ನಿಶ್ಚಿಂತೆಯಿಂದ ಇರಿಸಿದವನು ನೀನೇ ಅಲ್ಲವೇ.
10 ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; ತಾಯಿ ಹೆತ್ತಂದಿನಿಂದ ನನ್ನ ದೇವರು ನೀನೇ.
11 ನನಗೀಗ ಕಷ್ಟವು ಪ್ರಾಪ್ತವಾಗಿದೆ; ಸಹಾಯಕರು ಯಾರೂ ಇಲ್ಲ, ದೂರವಾಗಿರಬೇಡ.
ಕೀರ್ತ 22 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019