6ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ.
7ನನ್ನನ್ನು ನೋಡುವವರೆಲ್ಲರೂ ಹಾಸ್ಯಮಾಡುತ್ತಾರೆ; ಅವರು ಓರೇ ತುಟಿ ಮಾಡಿ ತಲೆ ಆಡಿಸುತ್ತಾ,
8“ಯೆಹೋವನು ತನ್ನನ್ನು ರಕ್ಷಿಸುವನೆಂದು ಆತನಲ್ಲಿ ಭರವಸವಿಟ್ಟಿದ್ದಾನಲ್ಲಾ; ಆತನು ಇವನನ್ನು ಮೆಚ್ಚಿದ್ದಾದರೆ ರಕ್ಷಿಸಲಿ” ಎಂದು ಹೇಳುತ್ತಾರೆ.
9ತಾಯಿಯ ಗರ್ಭದೊಳಗಿಂದ ನನ್ನನ್ನು ಬರಮಾಡಿದವನು ನೀನೇ ಅಲ್ಲವೇ. ತಾಯಿಯ ಎದೆಯಲ್ಲಿ ನನ್ನನ್ನು ನಿಶ್ಚಿಂತೆಯಿಂದ ಇರಿಸಿದವನು ನೀನೇ ಅಲ್ಲವೇ.
10ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; ತಾಯಿ ಹೆತ್ತಂದಿನಿಂದ ನನ್ನ ದೇವರು ನೀನೇ.
11ನನಗೀಗ ಕಷ್ಟವು ಪ್ರಾಪ್ತವಾಗಿದೆ; ಸಹಾಯಕರು ಯಾರೂ ಇಲ್ಲ, ದೂರವಾಗಿರಬೇಡ.
12ಬಹಳ ಗೂಳಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವುಳ್ಳ ಹೋರಿಗಳು ನನ್ನನ್ನು ಮುತ್ತಿಕೊಂಡಿವೆ.
13ಅವರು ಗರ್ಜಿಸುವ ಉಗ್ರಸಿಂಹಗಳಂತೆ ನನ್ನನ್ನು ನುಂಗುವುದಕ್ಕೆ ಬಾಯಿ ತೆರೆದಿದ್ದಾರೆ.
14ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿದೆ. ನನ್ನ ಹೃದಯ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ.
15ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ; ನನ್ನ ನಾಲಿಗೆಯು ಬಾಯಿಯ ಅಂಗಳಕ್ಕೆ ಹತ್ತಿಹೋಗಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ.