Text copied!
Bibles in Kannada

ಕೀರ್ತ 24:3-10 in Kannada

Help us?

ಕೀರ್ತ 24:3-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನ ಪರ್ವತವನ್ನು ಹತ್ತತಕ್ಕವನು ಯಾರು? ಆತನ ಪವಿತ್ರಸ್ಥಾನದಲ್ಲಿ ಪ್ರವೇಶಿಸುವುದಕ್ಕೆ ಎಂಥವನು ಯೋಗ್ಯನು?
4 ಯಾರು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ, ಮೋಸ ಪ್ರಮಾಣಮಾಡದೆ, ಶುದ್ಧಹಸ್ತವೂ, ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ,
5 ಅವನೇ ಯೆಹೋವನಿಂದ ಶುಭವನ್ನು ಹೊಂದುವನು; ತನ್ನ ರಕ್ಷಕನಾದ ದೇವರಿಂದ ನೀತಿಫಲವನ್ನು ಪಡೆಯುವನು.
6 ಇಂಥವರೇ ಆತನ ದರ್ಶನವನ್ನು ಬಯಸುವವರು. ಯಾಕೋಬ್ಯರ ದೇವರೇ, ನಿನ್ನ ಸಾನ್ನಿಧ್ಯವನ್ನು ಸೇರುವವರು ಇಂಥವರೇ. ಸೆಲಾ
7 ದ್ವಾರಗಳೇ, ಉನ್ನತವಾಗಿರ್ರಿ! ಪುರಾತನವಾದ ಕದಗಳೇ ತೆರೆದುಕೊಂಡಿರ್ರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ.
8 ಮಹಾಮಹಿಮೆಯುಳ್ಳ ಈ ಅರಸನು ಯಾರು? ಮಹಾ ಬಲಿಷ್ಠನೂ, ವಿಶೇಷ ಪರಾಕ್ರಮಿಯೂ ಆಗಿರುವ ಯೆಹೋವ, ಯುದ್ಧವೀರನಾಗಿರುವ ಯೆಹೋವ.
9 ದ್ವಾರಗಳೇ, ಉನ್ನತವಾಗಿರ್ರಿ! ಪುರಾತನವಾದ ಕದಗಳೇ, ತೆರೆದುಕೊಂಡಿರ್ರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ.
10 ಮಹಾಮಹಿಮೆಯುಳ್ಳ ಈ ಅರಸನು ಯಾರು? ಸೇನಾಧೀಶ್ವರನಾದ ಯೆಹೋವನೇ, ಮಹಾಮಹಿಮೆಯುಳ್ಳ ಅರಸನು ಈತನೇ. ಸೆಲಾ.
ಕೀರ್ತ 24 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019