Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 25

ಕೀರ್ತ 25:1-7

Help us?
Click on verse(s) to share them!
1ದಾವೀದನ ಕೀರ್ತನೆ. ಯೆಹೋವನೇ, ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ.
2ನನ್ನ ದೇವರೇ, ನಿನ್ನನ್ನೇ ನಂಬಿದ್ದೇನೆ, ನನ್ನನ್ನು ಅಪಮಾನಕ್ಕೆ ಗುರಿಪಡಿಸಬೇಡ. ಶತ್ರುಗಳ ಉತ್ಸಾಹಕ್ಕೆ ಆಸ್ಪದಮಾಡಬೇಡ.
3ನಿಷ್ಕಾರಣ ದ್ರೋಹಿಗಳಿಗೆ ಅಪಮಾನವಾಗಬೇಕೇ ಹೊರತು, ನಿನ್ನನ್ನು ನಿರೀಕ್ಷಿಸಿದವರಿಗೆ ಎಂದಿಗೂ ಆಗಬಾರದು.
4ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ತಿಳಿಯಪಡಿಸು; ನೀನು ಒಪ್ಪುವ ದಾರಿಯನ್ನು ತೋರಿಸು.
5ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡೆಸುತ್ತಾ ಉಪದೇಶಿಸು; ನೀನೇ ನನ್ನನ್ನು ರಕ್ಷಿಸುವ ದೇವರು; ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ.
6ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ, ನನಗೆ ಮಾಡಿದ ಮಹೋಪಕಾರಗಳನ್ನು ನೆನಸಿಕೋ.
7ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿಡದೆ, ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಪುಮಾಡಿಕೋ.

Read ಕೀರ್ತ 25ಕೀರ್ತ 25
Compare ಕೀರ್ತ 25:1-7ಕೀರ್ತ 25:1-7