Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 25

ಕೀರ್ತ 25:2-10

Help us?
Click on verse(s) to share them!
2ನನ್ನ ದೇವರೇ, ನಿನ್ನನ್ನೇ ನಂಬಿದ್ದೇನೆ, ನನ್ನನ್ನು ಅಪಮಾನಕ್ಕೆ ಗುರಿಪಡಿಸಬೇಡ. ಶತ್ರುಗಳ ಉತ್ಸಾಹಕ್ಕೆ ಆಸ್ಪದಮಾಡಬೇಡ.
3ನಿಷ್ಕಾರಣ ದ್ರೋಹಿಗಳಿಗೆ ಅಪಮಾನವಾಗಬೇಕೇ ಹೊರತು, ನಿನ್ನನ್ನು ನಿರೀಕ್ಷಿಸಿದವರಿಗೆ ಎಂದಿಗೂ ಆಗಬಾರದು.
4ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ತಿಳಿಯಪಡಿಸು; ನೀನು ಒಪ್ಪುವ ದಾರಿಯನ್ನು ತೋರಿಸು.
5ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡೆಸುತ್ತಾ ಉಪದೇಶಿಸು; ನೀನೇ ನನ್ನನ್ನು ರಕ್ಷಿಸುವ ದೇವರು; ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ.
6ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ, ನನಗೆ ಮಾಡಿದ ಮಹೋಪಕಾರಗಳನ್ನು ನೆನಸಿಕೋ.
7ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿಡದೆ, ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಪುಮಾಡಿಕೋ.
8ಯೆಹೋವನು ದಯಾಳುವೂ, ಸತ್ಯಸ್ವರೂಪನೂ ಆಗಿದ್ದಾನೆ; ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡೆಸುವನು.
9ಆತನು ದೀನರನ್ನು ತನ್ನ ವಿಧಿಗನುಗುಣವಾಗಿ ನಡೆಸುವನು; ಅವರಿಗೆ ತನ್ನ ಮಾರ್ಗವನ್ನು ತೋರಿಸುವನು.
10ಯೆಹೋವನ ನಿಬಂಧನೆ ಮತ್ತು ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ, ಆತನ ಎಲ್ಲಾ ಮಾರ್ಗಗಳು ಕೃಪೆಯೂ, ಸತ್ಯತೆಯುಳ್ಳವು.

Read ಕೀರ್ತ 25ಕೀರ್ತ 25
Compare ಕೀರ್ತ 25:2-10ಕೀರ್ತ 25:2-10