Text copied!
Bibles in Kannada

ಕೀರ್ತ 25:5-10 in Kannada

Help us?

ಕೀರ್ತ 25:5-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡೆಸುತ್ತಾ ಉಪದೇಶಿಸು; ನೀನೇ ನನ್ನನ್ನು ರಕ್ಷಿಸುವ ದೇವರು; ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ.
6 ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ, ನನಗೆ ಮಾಡಿದ ಮಹೋಪಕಾರಗಳನ್ನು ನೆನಸಿಕೋ.
7 ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿಡದೆ, ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಪುಮಾಡಿಕೋ.
8 ಯೆಹೋವನು ದಯಾಳುವೂ, ಸತ್ಯಸ್ವರೂಪನೂ ಆಗಿದ್ದಾನೆ; ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡೆಸುವನು.
9 ಆತನು ದೀನರನ್ನು ತನ್ನ ವಿಧಿಗನುಗುಣವಾಗಿ ನಡೆಸುವನು; ಅವರಿಗೆ ತನ್ನ ಮಾರ್ಗವನ್ನು ತೋರಿಸುವನು.
10 ಯೆಹೋವನ ನಿಬಂಧನೆ ಮತ್ತು ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ, ಆತನ ಎಲ್ಲಾ ಮಾರ್ಗಗಳು ಕೃಪೆಯೂ, ಸತ್ಯತೆಯುಳ್ಳವು.
ಕೀರ್ತ 25 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019