Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 25

ಕೀರ್ತ 25:6-21

Help us?
Click on verse(s) to share them!
6ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ, ನನಗೆ ಮಾಡಿದ ಮಹೋಪಕಾರಗಳನ್ನು ನೆನಸಿಕೋ.
7ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿಡದೆ, ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಪುಮಾಡಿಕೋ.
8ಯೆಹೋವನು ದಯಾಳುವೂ, ಸತ್ಯಸ್ವರೂಪನೂ ಆಗಿದ್ದಾನೆ; ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡೆಸುವನು.
9ಆತನು ದೀನರನ್ನು ತನ್ನ ವಿಧಿಗನುಗುಣವಾಗಿ ನಡೆಸುವನು; ಅವರಿಗೆ ತನ್ನ ಮಾರ್ಗವನ್ನು ತೋರಿಸುವನು.
10ಯೆಹೋವನ ನಿಬಂಧನೆ ಮತ್ತು ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ, ಆತನ ಎಲ್ಲಾ ಮಾರ್ಗಗಳು ಕೃಪೆಯೂ, ಸತ್ಯತೆಯುಳ್ಳವು.
11ಯೆಹೋವನೇ, ನನ್ನ ಪಾಪವು ಬಹುಘೋರವಾಗಿದೆ; ಆದರೂ ನಿನ್ನ ಹೆಸರಿನ ನಿಮಿತ್ತ ಅದನ್ನು ಕ್ಷಮಿಸು.
12ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವರೋ ಅವರಿಗೆ ಉಚಿತವಾದ ಮಾರ್ಗವನ್ನು ಆತನು ಬೋಧಿಸುವನು.
13ಅವರು ಸುಖದಿಂದಲೇ ಇರುವರು; ಅವರ ಸಂತತಿಯವರು ದೇಶವನ್ನು ಅನುಭವಿಸುವರು.
14ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.
15ನನ್ನ ದೃಷ್ಟಿ ಯಾವಾಗಲೂ ಯೆಹೋವನಲ್ಲಿದೆ; ಆತನೇ ನನ್ನ ಕಾಲುಗಳನ್ನು ಬಲೆಯಿಂದ ಬಿಡಿಸುವವನು.
16ನಾನು ಒಬ್ಬೊಂಟಿಗನೂ, ಬಾಧೆಪಡುವವನೂ ಆಗಿದ್ದೇನೆ; ನೀನು ಕಟಾಕ್ಷವಿಟ್ಟು ನನ್ನನ್ನು ಕರುಣಿಸು.
17ನನ್ನ ಮನೋವ್ಯಥೆಗಳನ್ನು ನಿವಾರಿಸು; ಸಂಕಟಗಳಿಂದ ನನ್ನನ್ನು ಬಿಡಿಸು.
18ನಾನು ಕುಗ್ಗಿರುವುದನ್ನೂ, ಕಷ್ಟಪಡುವುದನ್ನೂ ನೋಡಿ, ನನ್ನ ಎಲ್ಲಾ ಪಾಪಗಳನ್ನು ಪರಿಹರಿಸು.
19ನನಗೆ ಎಷ್ಟೋ ಶತ್ರುಗಳು ಇದ್ದಾರಲ್ಲಾ; ಅವರು ಕಡು ವೈರತ್ವದಿಂದ ನನ್ನನ್ನು ಹಗೆಮಾಡುತ್ತಾರೆ.
20ನನ್ನ ಪ್ರಾಣವನ್ನು ಕಾಪಾಡಿ ಉಳಿಸು; ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ, ನನಗೆ ಆಶಾಭಂಗವಾಗಬಾರದು.
21ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನಿರ್ದೋಷಭಕ್ತಿಯೂ ಮತ್ತು ಯಥಾರ್ಥತ್ವವೂ ನನ್ನನ್ನು ಕಾಯಲಿ.

Read ಕೀರ್ತ 25ಕೀರ್ತ 25
Compare ಕೀರ್ತ 25:6-21ಕೀರ್ತ 25:6-21