1ದಾವೀದನ ಕೀರ್ತನೆ. ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.
2ಯೆಹೋವನೇ, ನನ್ನನ್ನು ಪರೀಕ್ಷಿಸು, ಪರಿಶೀಲಿಸು; ನನ್ನ ಅಂತರಿಂದ್ರಿಯವನ್ನೂ, ಹೃದಯವನ್ನೂ ಪರಿಶೋಧಿಸು.
3ನಿನ್ನ ಶಾಶ್ವತವಾದ ಪ್ರೀತಿಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡಿದ್ದೇನೆ; ನಿನಗೆ ನಂಬಿಗಸ್ತನಾಗಿ ನಡೆದುಕೊಂಡಿದ್ದೇನೆ.
4ನಾನು ಮೋಸಗಾರರ ಸಹವಾಸ ಮಾಡುವವನಲ್ಲ; ಕಪಟಿಗಳನ್ನು ಸೇರುವವನಲ್ಲ.
5ನನಗೆ ದುರ್ಜನರ ಕೂಟವು ಅಸಹ್ಯ; ದುಷ್ಟರ ಸಂಗವು ಬೇಕಿಲ್ಲ.