3ನಿನ್ನ ಶಾಶ್ವತವಾದ ಪ್ರೀತಿಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡಿದ್ದೇನೆ; ನಿನಗೆ ನಂಬಿಗಸ್ತನಾಗಿ ನಡೆದುಕೊಂಡಿದ್ದೇನೆ.
4ನಾನು ಮೋಸಗಾರರ ಸಹವಾಸ ಮಾಡುವವನಲ್ಲ; ಕಪಟಿಗಳನ್ನು ಸೇರುವವನಲ್ಲ.
5ನನಗೆ ದುರ್ಜನರ ಕೂಟವು ಅಸಹ್ಯ; ದುಷ್ಟರ ಸಂಗವು ಬೇಕಿಲ್ಲ.
6ಯೆಹೋವನೇ, ನಾನು ನಿರ್ದೋಷಿ ಎಂದು, ಕೈಗಳನ್ನು ತೊಳೆದುಕೊಂಡವನಾಗಿ,
7ನಿನ್ನ ಅದ್ಭುತಕೃತ್ಯಗಳ ವರ್ಣನೆಯ ಸ್ತೋತ್ರ ಮಾಡುತ್ತಾ, ನಿನ್ನ ಯಜ್ಞವೇದಿಯನ್ನು ಪ್ರದಕ್ಷಿಣೆಮಾಡುವೆನು.