Text copied!
Bibles in Kannada

ಕೀರ್ತ 26:4-10 in Kannada

Help us?

ಕೀರ್ತ 26:4-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ಮೋಸಗಾರರ ಸಹವಾಸ ಮಾಡುವವನಲ್ಲ; ಕಪಟಿಗಳನ್ನು ಸೇರುವವನಲ್ಲ.
5 ನನಗೆ ದುರ್ಜನರ ಕೂಟವು ಅಸಹ್ಯ; ದುಷ್ಟರ ಸಂಗವು ಬೇಕಿಲ್ಲ.
6 ಯೆಹೋವನೇ, ನಾನು ನಿರ್ದೋಷಿ ಎಂದು, ಕೈಗಳನ್ನು ತೊಳೆದುಕೊಂಡವನಾಗಿ,
7 ನಿನ್ನ ಅದ್ಭುತಕೃತ್ಯಗಳ ವರ್ಣನೆಯ ಸ್ತೋತ್ರ ಮಾಡುತ್ತಾ, ನಿನ್ನ ಯಜ್ಞವೇದಿಯನ್ನು ಪ್ರದಕ್ಷಿಣೆಮಾಡುವೆನು.
8 ಯೆಹೋವನೇ, ನಿನ್ನ ನಿವಾಸವು ನನಗೆ ಎಷ್ಟೋ ಪ್ರಿಯ; ನಿನ್ನ ಪ್ರಭಾವ ಸ್ಥಾನವು ನನಗೆ ಇಷ್ಟ.
9 ಪಾಪಿಷ್ಠರ ಪ್ರಾಣದ ಸಂಗಡ ನನ್ನ ಪ್ರಾಣವನ್ನೂ ತೆಗೆಯಬೇಡ; ಕೊಲೆಪಾತಕರ ಜೀವದೊಂದಿಗೆ ನನ್ನ ಜೀವವನ್ನೂ ತೆಗೆಯಬೇಡ.
10 ಅವರ ಕೈಗಳು ಬಲಾತ್ಕಾರ ನಡೆಸುತ್ತವೆ; ಅವರ ಬಲಗೈ ಲಂಚದಿಂದ ತುಂಬಿದೆ.
ಕೀರ್ತ 26 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019