7ನಿನ್ನ ಅದ್ಭುತಕೃತ್ಯಗಳ ವರ್ಣನೆಯ ಸ್ತೋತ್ರ ಮಾಡುತ್ತಾ, ನಿನ್ನ ಯಜ್ಞವೇದಿಯನ್ನು ಪ್ರದಕ್ಷಿಣೆಮಾಡುವೆನು.
8ಯೆಹೋವನೇ, ನಿನ್ನ ನಿವಾಸವು ನನಗೆ ಎಷ್ಟೋ ಪ್ರಿಯ; ನಿನ್ನ ಪ್ರಭಾವ ಸ್ಥಾನವು ನನಗೆ ಇಷ್ಟ.
9ಪಾಪಿಷ್ಠರ ಪ್ರಾಣದ ಸಂಗಡ ನನ್ನ ಪ್ರಾಣವನ್ನೂ ತೆಗೆಯಬೇಡ; ಕೊಲೆಪಾತಕರ ಜೀವದೊಂದಿಗೆ ನನ್ನ ಜೀವವನ್ನೂ ತೆಗೆಯಬೇಡ.