Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 27

ಕೀರ್ತ 27:2-7

Help us?
Click on verse(s) to share them!
2ನನ್ನನ್ನು ಬಾಧಿಸುತ್ತಿರುವ ದುರ್ವೈರಿಗಳು ನನ್ನನ್ನು ನುಂಗಿಬಿಡಬೇಕೆಂದು ಬಂದು, ತಾವೇ ನೆಲಕ್ಕೆ ಬಿದ್ದುಹೋದರು.
3ನನಗೆ ವಿರುದ್ಧವಾಗಿ ದಂಡು ಬಂದಿಳಿದರೂ ನನಗೇನೂ ಭಯವಿಲ್ಲ; ಚತುರಂಗಬಲವು ಯುದ್ಧಸನ್ನದ್ಧವಾಗಿ ನಿಂತರೂ, ಭರವಸವುಳ್ಳವನಾಗಿಯೇ ಇರುವೆನು.
4ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ, ಆತನ ಪ್ರಸನ್ನತೆಯನ್ನು ನೋಡುವುದಕ್ಕೂ, ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು.
5ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು; ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು; ಪರ್ವತಶಿಖರದ ಮೇಲೆ ನನ್ನನ್ನು ಸುರಕ್ಷಿತವಾಗಿ ನಿಲ್ಲಿಸುವನು.
6ಹೀಗಿರುವುದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ, ನನ್ನ ತಲೆ ಎತ್ತಲ್ಪಟ್ಟಿರುವುದು; ನಾನು ಯೆಹೋವನ ಗುಡಾರದಲ್ಲಿ, ಉತ್ಸಾಹಧ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು. ಆತನನ್ನು ಹಾಡುತ್ತಾ ವಾದ್ಯಬಾರಿಸುವೆನು.
7ಯೆಹೋವನೇ, ನಿನಗೆ ಗಟ್ಟಿಯಾಗಿ ಮೊರೆಯಿಡುತ್ತೇನೆ; ನನ್ನನ್ನು ಕರುಣಿಸಿ, ಸದುತ್ತರವನ್ನು ದಯಪಾಲಿಸು.

Read ಕೀರ್ತ 27ಕೀರ್ತ 27
Compare ಕೀರ್ತ 27:2-7ಕೀರ್ತ 27:2-7