Text copied!
Bibles in Kannada

ಕೀರ್ತ 27:3-8 in Kannada

Help us?

ಕೀರ್ತ 27:3-8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನಗೆ ವಿರುದ್ಧವಾಗಿ ದಂಡು ಬಂದಿಳಿದರೂ ನನಗೇನೂ ಭಯವಿಲ್ಲ; ಚತುರಂಗಬಲವು ಯುದ್ಧಸನ್ನದ್ಧವಾಗಿ ನಿಂತರೂ, ಭರವಸವುಳ್ಳವನಾಗಿಯೇ ಇರುವೆನು.
4 ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ, ಆತನ ಪ್ರಸನ್ನತೆಯನ್ನು ನೋಡುವುದಕ್ಕೂ, ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು.
5 ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು; ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು; ಪರ್ವತಶಿಖರದ ಮೇಲೆ ನನ್ನನ್ನು ಸುರಕ್ಷಿತವಾಗಿ ನಿಲ್ಲಿಸುವನು.
6 ಹೀಗಿರುವುದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ, ನನ್ನ ತಲೆ ಎತ್ತಲ್ಪಟ್ಟಿರುವುದು; ನಾನು ಯೆಹೋವನ ಗುಡಾರದಲ್ಲಿ, ಉತ್ಸಾಹಧ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು. ಆತನನ್ನು ಹಾಡುತ್ತಾ ವಾದ್ಯಬಾರಿಸುವೆನು.
7 ಯೆಹೋವನೇ, ನಿನಗೆ ಗಟ್ಟಿಯಾಗಿ ಮೊರೆಯಿಡುತ್ತೇನೆ; ನನ್ನನ್ನು ಕರುಣಿಸಿ, ಸದುತ್ತರವನ್ನು ದಯಪಾಲಿಸು.
8 “ನನ್ನ ಸಾನ್ನಿಧ್ಯಕ್ಕೆ ಬಾ” ಎಂಬ ನಿನ್ನ ಮಾತಿಗೆ, ನಾನು, “ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬಂದೇ ಬರುವೆನು” ಎಂದು ಉತ್ತರಕೊಟ್ಟೆನು.
ಕೀರ್ತ 27 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019