Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 29

ಕೀರ್ತ 29:1-5

Help us?
Click on verse(s) to share them!
1ದಾವೀದನ ಕೀರ್ತನೆ. ದೇವದೂತರುಗಳಿರಾ, ಪರಮಪ್ರಭಾವವು, ಯೆಹೋವನದೇ, ಯೆಹೋವನದೇ ಎಂದು ಹೇಳಿ ಕೊಂಡಾಡಿರಿ.
2ಯೆಹೋವನ ನಾಮಕ್ಕೆ ಯೋಗ್ಯವಾದ ಘನತೆಯನ್ನು ಸಲ್ಲಿಸಿರಿ; ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ಅಡ್ಡಬೀಳಿರಿ.
3ಯೆಹೋವನ ಮಹಾಧ್ವನಿಯು ಮೇಘಮಂಡಲದಲ್ಲಿ ಕೇಳಿಸುತ್ತದೆ; ಪ್ರಭಾವಸ್ವರೂಪನಾದ ದೇವರು ಗುಡುಗುತ್ತಾನೆ; ಯೆಹೋವನು ಆಕಾಶದ ಜಲರಾಶಿಗಳ ಮೇಲೆ ಇದ್ದಾನೆ.
4ಯೆಹೋವನ ಧ್ವನಿಯು ಎಷ್ಟೋ ಬಲವುಳ್ಳದ್ದು, ಎಷ್ಟೋ ಗಂಭೀರವಾದದ್ದು.
5ಯೆಹೋವನ ಗರ್ಜನೆಗೆ ದೇವದಾರು ವೃಕ್ಷಗಳು ದಡಲ್ ಎಂದು ಮುರಿದು ಬೀಳುತ್ತವೆ; ಯೆಹೋವನು ಲೆಬನೋನ್ ಪರ್ವತದಲ್ಲಿನ ಮಹಾದೇವದಾರುಗಳನ್ನೂ ಮುರಿದುಬಿಡುತ್ತಾನೆ.

Read ಕೀರ್ತ 29ಕೀರ್ತ 29
Compare ಕೀರ್ತ 29:1-5ಕೀರ್ತ 29:1-5