Text copied!
Bibles in Kannada

ಕೀರ್ತ 29:1-5 in Kannada

Help us?

ಕೀರ್ತ 29:1-5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾವೀದನ ಕೀರ್ತನೆ. ದೇವದೂತರುಗಳಿರಾ, ಪರಮಪ್ರಭಾವವು, ಯೆಹೋವನದೇ, ಯೆಹೋವನದೇ ಎಂದು ಹೇಳಿ ಕೊಂಡಾಡಿರಿ.
2 ಯೆಹೋವನ ನಾಮಕ್ಕೆ ಯೋಗ್ಯವಾದ ಘನತೆಯನ್ನು ಸಲ್ಲಿಸಿರಿ; ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ಅಡ್ಡಬೀಳಿರಿ.
3 ಯೆಹೋವನ ಮಹಾಧ್ವನಿಯು ಮೇಘಮಂಡಲದಲ್ಲಿ ಕೇಳಿಸುತ್ತದೆ; ಪ್ರಭಾವಸ್ವರೂಪನಾದ ದೇವರು ಗುಡುಗುತ್ತಾನೆ; ಯೆಹೋವನು ಆಕಾಶದ ಜಲರಾಶಿಗಳ ಮೇಲೆ ಇದ್ದಾನೆ.
4 ಯೆಹೋವನ ಧ್ವನಿಯು ಎಷ್ಟೋ ಬಲವುಳ್ಳದ್ದು, ಎಷ್ಟೋ ಗಂಭೀರವಾದದ್ದು.
5 ಯೆಹೋವನ ಗರ್ಜನೆಗೆ ದೇವದಾರು ವೃಕ್ಷಗಳು ದಡಲ್ ಎಂದು ಮುರಿದು ಬೀಳುತ್ತವೆ; ಯೆಹೋವನು ಲೆಬನೋನ್ ಪರ್ವತದಲ್ಲಿನ ಮಹಾದೇವದಾರುಗಳನ್ನೂ ಮುರಿದುಬಿಡುತ್ತಾನೆ.
ಕೀರ್ತ 29 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019