1ಅನ್ಯಜನಾಂಗಗಳು ದಂಗೆಗೆ ಏಳುವುದೂ, ಜನಾಂಗಗಳು ವ್ಯರ್ಥಕಾರ್ಯಗಳನ್ನು ಯೋಚಿಸುವುದೂ ಏಕೆ?
2ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ,
3“ನಮಗೆ ಅವರು ಹಾಕಿದ ಬಂಧನಗಳನ್ನು ಕಿತ್ತುಹಾಕಿ, ಬೇಡಿಗಳನ್ನು ಮುರಿದು ಬಿಸಾಡೋಣ” ಎಂದು ಮಾತನಾಡಿಕೊಳ್ಳುತ್ತಾರಲ್ಲಾ.
4ಪರಲೋಕದಲ್ಲಿ ಆಸೀನನಾಗಿರುವಾತನು ಅದಕ್ಕೆ ನಗುವನು; ಕರ್ತನು ಅವರನ್ನು ಪರಿಹಾಸ್ಯಮಾಡುವನು.
5ಅನಂತರ ಆತನು ಸಿಟ್ಟಾಗಿ, ಕೋಪಾವೇಶದಿಂದ ಅವರನ್ನು ಕಳವಳಗೊಳಿಸಿ,
6“ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.