10ಆದುದರಿಂದ ಅರಸುಗಳಿರಾ, ವಿವೇಕಿಗಳಾಗಿರಿ; ದೇಶಾಧಿಪತಿಗಳಿರಾ, ಬುದ್ಧಿವಾದಕ್ಕೆ ಕಿವಿಗೊಡಿರಿ.
11ಯೆಹೋವನನ್ನು ಭಯಭಕ್ತಿಯಿಂದ ಸೇವಿಸಿರಿ; ನಡುಗುತ್ತಾ ಉಲ್ಲಾಸಪಡಿರಿ.
12ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.