Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 2

ಕೀರ್ತ 2:5-10

Help us?
Click on verse(s) to share them!
5ಅನಂತರ ಆತನು ಸಿಟ್ಟಾಗಿ, ಕೋಪಾವೇಶದಿಂದ ಅವರನ್ನು ಕಳವಳಗೊಳಿಸಿ,
6“ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.
7ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ, “ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
8ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನಮಾಡುವೆನು; ಭೂಮಿಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವತ್ತಾಗಿ ಕೊಡುವೆನು.
9ನೀನು ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ” ಎಂದು ಹೇಳಿದನು.
10ಆದುದರಿಂದ ಅರಸುಗಳಿರಾ, ವಿವೇಕಿಗಳಾಗಿರಿ; ದೇಶಾಧಿಪತಿಗಳಿರಾ, ಬುದ್ಧಿವಾದಕ್ಕೆ ಕಿವಿಗೊಡಿರಿ.

Read ಕೀರ್ತ 2ಕೀರ್ತ 2
Compare ಕೀರ್ತ 2:5-10ಕೀರ್ತ 2:5-10