Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 30

ಕೀರ್ತ 30:1-8

Help us?
Click on verse(s) to share them!
1ದಾವೀದನ ಕೀರ್ತನೆ, ದೇವಾಲಯದ ಪ್ರತಿಷ್ಠೆಯಲ್ಲಿ ಹಾಡತಕ್ಕದ್ದು. ಯೆಹೋವನೇ, ನನ್ನ ಶತ್ರುಗಳು ಸಂತೋಷಿಸುವುದಕ್ಕೆ ಅವಕಾಶಕೊಡದೆ, ನನ್ನನ್ನು ಉದ್ಧರಿಸಿದ್ದರಿಂದ ನಿನ್ನನ್ನು ಕೊಂಡಾಡುವೆನು.
2ಯೆಹೋವನೇ, ನನ್ನ ದೇವರೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದಿ.
3ಯೆಹೋವನೇ, ನನ್ನ ಪ್ರಾಣವನ್ನು ಪಾತಾಳದಿಂದಲೂ ಎತ್ತಿದಿಯಲ್ಲಾ; ನನ್ನನ್ನು ಸಮಾಧಿಯಲ್ಲಿ ಸೇರಿಸದೆ ಬದುಕಿಸಿದಿಯಲ್ಲಾ.
4ಯೆಹೋವನ ಭಕ್ತರೇ, ಆತನನ್ನು ಕೀರ್ತಿಸಿರಿ; ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.
5ಆತನ ಕೋಪವು ಕ್ಷಣಮಾತ್ರವೇ; ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವುದು; ಸಂಜೆಗೆ ದುಃಖವೆಂಬುದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ, ಮುಂಜಾನೆ ಹರ್ಷಧ್ವನಿಯು ಕೇಳಿಸುವುದು.
6ನಾನಂತೂ ಸುಖದಿಂದಿದ್ದಾಗ, “ನಾನು ಎಂದಿಗೂ ಕದಲುವುದಿಲ್ಲ” ಎಂದು ಹೇಳಿಕೊಂಡಿದ್ದೆನು.
7ಯೆಹೋವನೇ, ಕೃಪೆಮಾಡಿ ನಾನಿರುವ ಬೆಟ್ಟಕ್ಕೆ ಸ್ಥಿರವಾದ ಬಲವನ್ನು ಅನುಗ್ರಹಿಸಿದಿಯಲ್ಲಾ. ಆದರೂ ನೀನು ನಿನ್ನ ಮುಖವನ್ನು ಮರೆಮಾಡಿಕೊಂಡಾಗ ನಾನು ಕಳವಳಗೊಂಡೆನು.
8ಯೆಹೋವನೇ, ನಿನಗೆ ಮೊರೆಯಿಟ್ಟೆನು; ನನ್ನ ಒಡೆಯನಿಗೆ ಬಿನ್ನವಿಸಿ,

Read ಕೀರ್ತ 30ಕೀರ್ತ 30
Compare ಕೀರ್ತ 30:1-8ಕೀರ್ತ 30:1-8