Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 30

ಕೀರ್ತ 30:5-12

Help us?
Click on verse(s) to share them!
5ಆತನ ಕೋಪವು ಕ್ಷಣಮಾತ್ರವೇ; ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವುದು; ಸಂಜೆಗೆ ದುಃಖವೆಂಬುದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ, ಮುಂಜಾನೆ ಹರ್ಷಧ್ವನಿಯು ಕೇಳಿಸುವುದು.
6ನಾನಂತೂ ಸುಖದಿಂದಿದ್ದಾಗ, “ನಾನು ಎಂದಿಗೂ ಕದಲುವುದಿಲ್ಲ” ಎಂದು ಹೇಳಿಕೊಂಡಿದ್ದೆನು.
7ಯೆಹೋವನೇ, ಕೃಪೆಮಾಡಿ ನಾನಿರುವ ಬೆಟ್ಟಕ್ಕೆ ಸ್ಥಿರವಾದ ಬಲವನ್ನು ಅನುಗ್ರಹಿಸಿದಿಯಲ್ಲಾ. ಆದರೂ ನೀನು ನಿನ್ನ ಮುಖವನ್ನು ಮರೆಮಾಡಿಕೊಂಡಾಗ ನಾನು ಕಳವಳಗೊಂಡೆನು.
8ಯೆಹೋವನೇ, ನಿನಗೆ ಮೊರೆಯಿಟ್ಟೆನು; ನನ್ನ ಒಡೆಯನಿಗೆ ಬಿನ್ನವಿಸಿ,
9“ನನ್ನನ್ನು ಕೊಂದುಹಾಕಿ ಸಮಾಧಿಗೆ ಸೇರಿಸಿದರೆ ನಿನಗೆ ಲಾಭವೇನು? ಮಣ್ಣು ನಿನ್ನನ್ನು ಸ್ತುತಿಸುವುದೋ? ಅದು ನಿನ್ನ ನಂಬಿಕೆಯನ್ನು ಹೊಗಳುವುದೇನು?
10ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳಿ ಕರುಣಿಸು; ಯೆಹೋವನೇ, ನನ್ನ ಸಹಾಯಕ್ಕೆ ಬಾ” ಎಂದು ಹೇಳಿದೆನು.
11ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ, ಸಂತೋಷದಿಂದ ಕುಣಿದಾಡುವಂತೆ ಮಾಡಿದಿ; ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು, ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ.
12ಇದರಿಂದ ಯೆಹೋವನೇ, ನನ್ನ ಮನಸ್ಸು ಎಡೆಬಿಡದೆ ನಿನ್ನನ್ನು ಕೀರ್ತಿಸುತ್ತಿರುವುದು; ನನ್ನ ದೇವರೇ, ನಿನ್ನನ್ನು ಸದಾಕಾಲವೂ ಸ್ತುತಿಸುವೆನು.

Read ಕೀರ್ತ 30ಕೀರ್ತ 30
Compare ಕೀರ್ತ 30:5-12ಕೀರ್ತ 30:5-12