Text copied!
Bibles in Kannada

ಕೀರ್ತ 31:11-16 in Kannada

Help us?

ಕೀರ್ತ 31:11-16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನನ್ನ ಎಲ್ಲಾ ಹಿಂಸಕರ ದೆಸೆಯಿಂದ ದೂಷಣೆಗೆ ಗುರಿಯಾದೆನು; ವಿಶೇಷವಾಗಿ ನೆರೆಯವರು ನನ್ನನ್ನು ನಿಂದಿಸುತ್ತಾರೆ. ನನ್ನ ಪರಿಚಿತರಿಗೆ ನನ್ನಲ್ಲಿ ಭೀತಿಯುಂಟಾಯಿತು; ನನ್ನನ್ನು ದಾರಿಯಲ್ಲಿ ಕಂಡವರೆಲ್ಲರು ಓರೆಯಾಗಿ ಹೋಗುತ್ತಾರೆ.
12 ನಾನು ಸತ್ತವರಂತೆ ಯಾರ ಜ್ಞಾಪಕಕ್ಕೂ ಬಾರದವನಾದೆನು; ಒಡೆದ ಬೋಕಿಯಂತಿದ್ದೇನೆ.
13 ಅನೇಕರು ನನ್ನ ಪ್ರಾಣ ತೆಗೆಯಬೇಕೆಂದು ಒಳ ಸಂಚುಮಾಡುತ್ತಿದ್ದಾರೆ; ಅವರು ಪಿಸುಗುಟ್ಟುವ ಮಾತುಗಳು ನನ್ನ ಕಿವಿಗೆ ಬಿದ್ದಿವೆ; ಎಲ್ಲಾ ಕಡೆಯಲ್ಲಿಯೂ ನನಗೆ ಭೀತಿಯುಂಟಾಗಿದೆ.
14 ನಾನಾದರೋ ಯೆಹೋವನೇ, ನಿನ್ನಲ್ಲೇ ಭರವಸವಿಟ್ಟಿದ್ದೇನೆ; ನೀನೇ ನನ್ನ ದೇವರೆಂದು ಹೇಳಿಕೊಂಡಿದ್ದೇನೆ.
15 ನನ್ನ ಆಯುಷ್ಕಾಲವು ನಿನ್ನ ಕೈಯಲ್ಲಿದೆ; ಹಿಂದಟ್ಟುವ ಶತ್ರುಗಳಿಂದ ನನ್ನನ್ನು ತಪ್ಪಿಸಿ ಕಾಪಾಡು.
16 ನಿನ್ನ ಸೇವಕನನ್ನು ಪ್ರಸನ್ನಮುಖದಿಂದ ನೋಡು; ಪ್ರೀತಿಯಿಂದ ನನ್ನನ್ನು ರಕ್ಷಿಸು.
ಕೀರ್ತ 31 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019