Text copied!
Bibles in Kannada

ಕೀರ್ತ 31:13-19 in Kannada

Help us?

ಕೀರ್ತ 31:13-19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅನೇಕರು ನನ್ನ ಪ್ರಾಣ ತೆಗೆಯಬೇಕೆಂದು ಒಳ ಸಂಚುಮಾಡುತ್ತಿದ್ದಾರೆ; ಅವರು ಪಿಸುಗುಟ್ಟುವ ಮಾತುಗಳು ನನ್ನ ಕಿವಿಗೆ ಬಿದ್ದಿವೆ; ಎಲ್ಲಾ ಕಡೆಯಲ್ಲಿಯೂ ನನಗೆ ಭೀತಿಯುಂಟಾಗಿದೆ.
14 ನಾನಾದರೋ ಯೆಹೋವನೇ, ನಿನ್ನಲ್ಲೇ ಭರವಸವಿಟ್ಟಿದ್ದೇನೆ; ನೀನೇ ನನ್ನ ದೇವರೆಂದು ಹೇಳಿಕೊಂಡಿದ್ದೇನೆ.
15 ನನ್ನ ಆಯುಷ್ಕಾಲವು ನಿನ್ನ ಕೈಯಲ್ಲಿದೆ; ಹಿಂದಟ್ಟುವ ಶತ್ರುಗಳಿಂದ ನನ್ನನ್ನು ತಪ್ಪಿಸಿ ಕಾಪಾಡು.
16 ನಿನ್ನ ಸೇವಕನನ್ನು ಪ್ರಸನ್ನಮುಖದಿಂದ ನೋಡು; ಪ್ರೀತಿಯಿಂದ ನನ್ನನ್ನು ರಕ್ಷಿಸು.
17 ಯೆಹೋವನೇ, ಮೊರೆಯಿಟ್ಟಿದ್ದೇನೆ; ನನ್ನನ್ನು ನಿರಾಶೆಪಡಿಸಬೇಡ. ದುಷ್ಟರಿಗೇ ಆಶಾಭಂಗವಾಗಲಿ; ಅವರು ಸ್ತಬ್ಧರಾಗಿ ಪಾತಾಳಕ್ಕೆ ಬೀಳಲಿ.
18 ಯಾರು ನೀತಿವಂತರನ್ನು ತಾತ್ಸಾರಮಾಡಿ ಗರ್ವದಿಂದಲೂ, ಕೊಬ್ಬಿನಿಂದಲೂ ಅವರಿಗೆ ವಿರುದ್ಧವಾಗಿ ಸುಳ್ಳು ಹೇಳುತ್ತಾರೋ ಅವರ ತುಟಿಗಳು ಮುಚ್ಚಿಹೋಗಲಿ.
19 ಸದ್ಭಕ್ತರಿಗೋಸ್ಕರ ನೀನು ಇಟ್ಟುಕೊಂಡಿರುವ ಮೇಲೂ, ಆಶ್ರಿತರಿಗೋಸ್ಕರ ನೀನು ಎಲ್ಲರ ಮುಂದೆ ಮಾಡಿದ ಉಪಕಾರಗಳೂ ಎಷ್ಟೋ ವಿಶೇಷವಾಗಿವೆ.
ಕೀರ್ತ 31 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019