18ಯಾರು ನೀತಿವಂತರನ್ನು ತಾತ್ಸಾರಮಾಡಿ ಗರ್ವದಿಂದಲೂ, ಕೊಬ್ಬಿನಿಂದಲೂ ಅವರಿಗೆ ವಿರುದ್ಧವಾಗಿ ಸುಳ್ಳು ಹೇಳುತ್ತಾರೋ ಅವರ ತುಟಿಗಳು ಮುಚ್ಚಿಹೋಗಲಿ.
19ಸದ್ಭಕ್ತರಿಗೋಸ್ಕರ ನೀನು ಇಟ್ಟುಕೊಂಡಿರುವ ಮೇಲೂ, ಆಶ್ರಿತರಿಗೋಸ್ಕರ ನೀನು ಎಲ್ಲರ ಮುಂದೆ ಮಾಡಿದ ಉಪಕಾರಗಳೂ ಎಷ್ಟೋ ವಿಶೇಷವಾಗಿವೆ.
20ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ ಅವರನ್ನು ನಿನ್ನ ಸಾನ್ನಿಧ್ಯದಲ್ಲಿಯೇ ಮರೆಮಾಡುತ್ತೀ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ಗುಪ್ತಸ್ಥಳದಲ್ಲಿ ಅಡಗಿಸುತ್ತೀ.
21ಮುತ್ತಿಗೆ ಹಾಕಲ್ಪಟ್ಟಿರುವ ನಗರದಲ್ಲಿದ್ದ ನನಗೆ, ತನ್ನ ಕೃಪೆಯನ್ನು ಆಶ್ಚರ್ಯಕರವಾಗಿ ತೋರಿಸಿದ ಯೆಹೋವನಿಗೆ ಸ್ತೋತ್ರ.
22ನಾನಂತೂ ಭಯಭ್ರಾಂತನಾಗಿ, “ನಿನ್ನ ಸಾನ್ನಿಧ್ಯದಿಂದ ತೆಗೆದುಹಾಕಲ್ಪಟ್ಟೆನು” ಎಂದು ಅಂದುಕೊಂಡೆನು; ಆದರೂ ನಾನು ಮೊರೆಯಿಡಲು ನೀನು ಕೇಳಿದಿ.
23ಭಕ್ತರೇ, ನೀವೆಲ್ಲರೂ ಯೆಹೋವನನ್ನು ಪ್ರೀತಿಸಿರಿ. ಆತನು ನಂಬಿಗಸ್ತರನ್ನು ಕಾಪಾಡುತ್ತಾನೆ; ಅಹಂಕಾರಿಗಳಿಗೆ ಚೆನ್ನಾಗಿ ಮುಯ್ಯಿತೀರಿಸುತ್ತಾನೆ.