Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 31

ಕೀರ್ತ 31:2-13

Help us?
Click on verse(s) to share them!
2ಕಿವಿಗೊಟ್ಟು ಕೇಳಿ ಬೇಗನೆ ನನ್ನನ್ನು ಬಿಡಿಸು; ನನ್ನನ್ನು ರಕ್ಷಿಸುವ ಆಶ್ರಯಗಿರಿಯೂ, ದುರ್ಗಸ್ಥಾನವೂ ಆಗಿರು.
3ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲಾ; ಆದುದರಿಂದ ನಿನ್ನ ಹೆಸರಿನ ನಿಮಿತ್ತ ದಾರಿತೋರಿಸಿ ನನ್ನನ್ನು ನಡೆಸು.
4ಶತ್ರುಗಳು ನನಗೆ ರಹಸ್ಯವಾಗಿ ಹಾಕಿದ ಬಲೆಯೊಳಗೆ ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು;
5ನೀನೇ ನನಗೆ ಆಧಾರವಲ್ಲವೇ; ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದೇನೆ. ಯೆಹೋವನೇ, ನಂಬಿಗಸ್ತನಾದ ದೇವರೇ, ನನ್ನನ್ನು ವಿಮೋಚಿಸಿದ್ದೀ.
6ವ್ಯರ್ಥವಾದ ವಿಗ್ರಹಗಳನ್ನೂ ಅವಲಂಬಿಸಿದವರನ್ನು ನಾನು ದ್ವೇಷಿಸುತ್ತೇನೆ; ನಾನಾದರೋ ಯೆಹೋವನಲ್ಲಿ ಭರವಸವಿಟ್ಟಿದ್ದೇನೆ.
7ನಿನ್ನ ಕೃಪೆಯಲ್ಲಿ ಸಂತೋಷಿಸಿ ಉಲ್ಲಾಸದಿಂದಿರುವೆನು; ನಾನು ಕುಗ್ಗಿಹೋಗಿರುವುದನ್ನು ನೋಡಿ, ನನ್ನ ಬಾಧೆಗಳನ್ನು ನೀನು ಲಕ್ಷ್ಯಕ್ಕೆ ತೆಗೆದುಕೊಂಡಿಯಲ್ಲಾ.
8ನೀನು ನನ್ನನ್ನು ಶತ್ರುಗಳ ಕೈಕೆಳಗೆ ಬೀಳಿಸಲಿಲ್ಲ; ನಿರಾತಂಕ ಸ್ಥಾನದಲ್ಲಿ ನನ್ನನ್ನು ನಿಲ್ಲಿಸಿದಿ.
9ಯೆಹೋವನೇ, ಕರುಣಿಸು; ಕಷ್ಟದಲ್ಲಿ ಬಿದ್ದಿದ್ದೇನೆ. ನನಗುಂಟಾದ ಬಾಧೆಯ ದೆಸೆಯಿಂದ ನನ್ನ ಕಣ್ಣು ಗುಡ್ಡೆ ಸೇದಿಹೋಗಿದೆ; ದೇಹಾತ್ಮಗಳು ಕುಗ್ಗಿಹೋದವು.
10ನನ್ನ ಜೀವಮಾನವೆಲ್ಲಾ ದುಃಖದಲ್ಲಿಯೂ, ನಿಟ್ಟುಸಿರಿನಲ್ಲಿಯೂ ಕಳೆದುಹೋಗುತ್ತಾ ಇದೆ; ನನ್ನ ಸಂಕಟಗಳಿಂದ ನನ್ನ ಶಕ್ತಿಯು ಕುಂದಿಹೋಗಿದೆ; ನನ್ನ ಎಲುಬುಗಳು ಸವೆದುಹೋಗಿವೆ.
11ನನ್ನ ಎಲ್ಲಾ ಹಿಂಸಕರ ದೆಸೆಯಿಂದ ದೂಷಣೆಗೆ ಗುರಿಯಾದೆನು; ವಿಶೇಷವಾಗಿ ನೆರೆಯವರು ನನ್ನನ್ನು ನಿಂದಿಸುತ್ತಾರೆ. ನನ್ನ ಪರಿಚಿತರಿಗೆ ನನ್ನಲ್ಲಿ ಭೀತಿಯುಂಟಾಯಿತು; ನನ್ನನ್ನು ದಾರಿಯಲ್ಲಿ ಕಂಡವರೆಲ್ಲರು ಓರೆಯಾಗಿ ಹೋಗುತ್ತಾರೆ.
12ನಾನು ಸತ್ತವರಂತೆ ಯಾರ ಜ್ಞಾಪಕಕ್ಕೂ ಬಾರದವನಾದೆನು; ಒಡೆದ ಬೋಕಿಯಂತಿದ್ದೇನೆ.
13ಅನೇಕರು ನನ್ನ ಪ್ರಾಣ ತೆಗೆಯಬೇಕೆಂದು ಒಳ ಸಂಚುಮಾಡುತ್ತಿದ್ದಾರೆ; ಅವರು ಪಿಸುಗುಟ್ಟುವ ಮಾತುಗಳು ನನ್ನ ಕಿವಿಗೆ ಬಿದ್ದಿವೆ; ಎಲ್ಲಾ ಕಡೆಯಲ್ಲಿಯೂ ನನಗೆ ಭೀತಿಯುಂಟಾಗಿದೆ.

Read ಕೀರ್ತ 31ಕೀರ್ತ 31
Compare ಕೀರ್ತ 31:2-13ಕೀರ್ತ 31:2-13