Text copied!
Bibles in Kannada

ಕೀರ್ತ 31:3-7 in Kannada

Help us?

ಕೀರ್ತ 31:3-7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲಾ; ಆದುದರಿಂದ ನಿನ್ನ ಹೆಸರಿನ ನಿಮಿತ್ತ ದಾರಿತೋರಿಸಿ ನನ್ನನ್ನು ನಡೆಸು.
4 ಶತ್ರುಗಳು ನನಗೆ ರಹಸ್ಯವಾಗಿ ಹಾಕಿದ ಬಲೆಯೊಳಗೆ ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು;
5 ನೀನೇ ನನಗೆ ಆಧಾರವಲ್ಲವೇ; ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದೇನೆ. ಯೆಹೋವನೇ, ನಂಬಿಗಸ್ತನಾದ ದೇವರೇ, ನನ್ನನ್ನು ವಿಮೋಚಿಸಿದ್ದೀ.
6 ವ್ಯರ್ಥವಾದ ವಿಗ್ರಹಗಳನ್ನೂ ಅವಲಂಬಿಸಿದವರನ್ನು ನಾನು ದ್ವೇಷಿಸುತ್ತೇನೆ; ನಾನಾದರೋ ಯೆಹೋವನಲ್ಲಿ ಭರವಸವಿಟ್ಟಿದ್ದೇನೆ.
7 ನಿನ್ನ ಕೃಪೆಯಲ್ಲಿ ಸಂತೋಷಿಸಿ ಉಲ್ಲಾಸದಿಂದಿರುವೆನು; ನಾನು ಕುಗ್ಗಿಹೋಗಿರುವುದನ್ನು ನೋಡಿ, ನನ್ನ ಬಾಧೆಗಳನ್ನು ನೀನು ಲಕ್ಷ್ಯಕ್ಕೆ ತೆಗೆದುಕೊಂಡಿಯಲ್ಲಾ.
ಕೀರ್ತ 31 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019