12ದೀರ್ಘಾಯುಷ್ಯವು ಬೇಕೋ? ಬಹುದಿನ ಬದುಕಿ ಸುಖವನ್ನು ಅನುಭವಿಸಬೇಕೋ?
13ಹಾಗಾದರೆ ಕೆಟ್ಟದ್ದಕ್ಕೆ ಹೋಗದಂತೆ ನಾಲಿಗೆಯನ್ನು ಕಾದುಕೋ; ವಂಚನೆಯ ಮಾತುಗಳಿಗೆ ಬಿಡದೆ ತುಟಿಗಳನ್ನು ಇಟ್ಟುಕೋ.
14ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು; ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು.
15ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.