Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 34

ಕೀರ್ತ 34:12-16

Help us?
Click on verse(s) to share them!
12ದೀರ್ಘಾಯುಷ್ಯವು ಬೇಕೋ? ಬಹುದಿನ ಬದುಕಿ ಸುಖವನ್ನು ಅನುಭವಿಸಬೇಕೋ?
13ಹಾಗಾದರೆ ಕೆಟ್ಟದ್ದಕ್ಕೆ ಹೋಗದಂತೆ ನಾಲಿಗೆಯನ್ನು ಕಾದುಕೋ; ವಂಚನೆಯ ಮಾತುಗಳಿಗೆ ಬಿಡದೆ ತುಟಿಗಳನ್ನು ಇಟ್ಟುಕೋ.
14ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು; ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು.
15ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.
16ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು.

Read ಕೀರ್ತ 34ಕೀರ್ತ 34
Compare ಕೀರ್ತ 34:12-16ಕೀರ್ತ 34:12-16