13ಹಾಗಾದರೆ ಕೆಟ್ಟದ್ದಕ್ಕೆ ಹೋಗದಂತೆ ನಾಲಿಗೆಯನ್ನು ಕಾದುಕೋ; ವಂಚನೆಯ ಮಾತುಗಳಿಗೆ ಬಿಡದೆ ತುಟಿಗಳನ್ನು ಇಟ್ಟುಕೋ.
14ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು; ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು.
15ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.
16ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು.
17ಯೆಹೋವನು ನೀತಿವಂತರ ಕೂಗನ್ನು ಕೇಳಿ, ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ.
18ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ.
19ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ, ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.
20ಆತನು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿದುಹೋಗುವುದಿಲ್ಲ.