Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 34

ಕೀರ್ತ 34:15-21

Help us?
Click on verse(s) to share them!
15ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.
16ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು.
17ಯೆಹೋವನು ನೀತಿವಂತರ ಕೂಗನ್ನು ಕೇಳಿ, ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ.
18ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ.
19ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ, ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.
20ಆತನು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿದುಹೋಗುವುದಿಲ್ಲ.
21ದುಷ್ಟನ ಕೆಡುಕು ಅವನನ್ನೇ ಕೊಲ್ಲುವುದು; ನೀತಿವಂತನನ್ನು ದ್ವೇಷಿಸುವವರು ಅಪರಾಧಿಗಳೆಂದು ಎಣಿಸಲ್ಪಡುವರು.

Read ಕೀರ್ತ 34ಕೀರ್ತ 34
Compare ಕೀರ್ತ 34:15-21ಕೀರ್ತ 34:15-21