Text copied!
Bibles in Kannada

ಕೀರ್ತ 34:15-21 in Kannada

Help us?

ಕೀರ್ತ 34:15-21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.
16 ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು.
17 ಯೆಹೋವನು ನೀತಿವಂತರ ಕೂಗನ್ನು ಕೇಳಿ, ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ.
18 ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ.
19 ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ, ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.
20 ಆತನು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿದುಹೋಗುವುದಿಲ್ಲ.
21 ದುಷ್ಟನ ಕೆಡುಕು ಅವನನ್ನೇ ಕೊಲ್ಲುವುದು; ನೀತಿವಂತನನ್ನು ದ್ವೇಷಿಸುವವರು ಅಪರಾಧಿಗಳೆಂದು ಎಣಿಸಲ್ಪಡುವರು.
ಕೀರ್ತ 34 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019