Text copied!
Bibles in Kannada

ಕೀರ್ತ 34:2-14 in Kannada

Help us?

ಕೀರ್ತ 34:2-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದು; ಇದನ್ನು ದೀನರು ಕೇಳಿ ಸಂತೋಷಿಸುವರು.
3 ನನ್ನೊಡನೆ ಯೆಹೋವನನ್ನು ಕೊಂಡಾಡಿರಿ; ನಾವು ಒಟ್ಟಾಗಿ ಆತನ ಹೆಸರನ್ನು ಘನಪಡಿಸೋಣ.
4 ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು, ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು.
5 ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; ಅವರ ಮುಖವು ಅವಮಾನಕ್ಕೆ ಈಡಾಗುವುದೇ ಇಲ್ಲ.
6 ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು, ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು.
7 ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ.
8 ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು.
9 ಯೆಹೋವನ ಜನರೇ, ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ; ಆತನಲ್ಲಿ ಭಯಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇರುವುದಿಲ್ಲ.
10 ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು; ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರಿಗೆ ಯಾವ ಒಳಿತಿಗೆ ಕೊರತೆಯಿಲ್ಲ.
11 ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ನಾನು ಯೆಹೋವನ ಭಯವನ್ನು ನಿಮಗೆ ಕಲಿಸುವೆನು.
12 ದೀರ್ಘಾಯುಷ್ಯವು ಬೇಕೋ? ಬಹುದಿನ ಬದುಕಿ ಸುಖವನ್ನು ಅನುಭವಿಸಬೇಕೋ?
13 ಹಾಗಾದರೆ ಕೆಟ್ಟದ್ದಕ್ಕೆ ಹೋಗದಂತೆ ನಾಲಿಗೆಯನ್ನು ಕಾದುಕೋ; ವಂಚನೆಯ ಮಾತುಗಳಿಗೆ ಬಿಡದೆ ತುಟಿಗಳನ್ನು ಇಟ್ಟುಕೋ.
14 ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು; ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು.
ಕೀರ್ತ 34 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019