Text copied!
Bibles in Kannada

ಕೀರ್ತ 35:1-14 in Kannada

Help us?

ಕೀರ್ತ 35:1-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾವೀದನ ಕೀರ್ತನೆ. ಯೆಹೋವನೇ, ನನ್ನ ಸಂಗಡ ವ್ಯಾಜ್ಯ ಮಾಡುವವರೊಡನೆ ವ್ಯಾಜ್ಯಮಾಡು; ನನ್ನ ಮೇಲೆ ಯುದ್ಧ ಮಾಡುವವರ ಸಂಗಡ ಯುದ್ಧ ಮಾಡು.
2 ಖೇಡ್ಯ ಮತ್ತು ಗುರಾಣಿಯನ್ನು ಹಿಡಿದುಕೊಂಡು, ನನಗೆ ಸಹಾಯಕನಾಗಿ ನಿಲ್ಲು.
3 ನೀನು ಭರ್ಜಿಯನ್ನೂ ಹಾಗೂ ಯುದ್ಧದ ಕೊಡಲಿಯನ್ನೂ ಹಿಡಿದು, ನನ್ನನ್ನು ಹಿಂದಟ್ಟುವ ವೈರಿಗಳನ್ನು ಎದುರಿಸು; “ನಾನೇ ನಿನ್ನ ರಕ್ಷಣೆ” ಎಂದು ಅಭಯಕೊಡು.
4 ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವರು ಆಶಾಭಂಗಪಟ್ಟು ಅವಮಾನಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಕಳವಳದಿಂದ ಹಿಂದಿರುಗಿ ಓಡಲಿ.
5 ಅವರು ಗಾಳಿ ಹಾರಿಸುವ ಹೊಟ್ಟಿನಂತಾಗಲಿ; ಯೆಹೋವನ ದೂತನು ಅವರನ್ನು ಅಟ್ಟಿಬಿಡಲಿ.
6 ಕತ್ತಲೆಯೂ, ಜಾರಿಕೆಯೂ ಇರುವ ದಾರಿಯಲ್ಲಿ ಯೆಹೋವನ ದೂತನು ಅವರನ್ನು ಹಿಂದಟ್ಟಲಿ.
7 ಅವರು ನಿಷ್ಕಾರಣವಾಗಿ ನನಗೆ ಬಲೆಯೊಡ್ಡಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣವನ್ನು ತೆಗೆಯಬೇಕೆಂದು ಗುಂಡಿಯನ್ನು ತೋಡಿದ್ದಾರೆ.
8 ಅವನಿಗೆ ನಾಶನವು ಆಕಸ್ಮಾತ್ತಾಗಿ ಬರಲಿ; ತಾನು ಹಾಸಿದ ಬಲೆಯಲ್ಲಿ ತಾನೇ ಸಿಕ್ಕಿಬೀಳಲಿ. ತಾನು ತೋಡಿದ ಕುಣಿಯಲ್ಲಿ ತಾನೇ ಬಿದ್ದುಹೋಗಲಿ.
9 ಆಗ ನನ್ನ ಮನಸ್ಸಿಗೆ ಯೆಹೋವನ ದೆಸೆಯಿಂದ ಹರ್ಷವುಂಟಾಗುವುದು; ಆತನಿಂದಾದ ರಕ್ಷಣೆಯ ನಿಮಿತ್ತ ಆನಂದಪಡುವೆನು.
10 ಯೆಹೋವನೇ, ಕುಗ್ಗಿದವನನ್ನು ಬಲಾತ್ಕಾರಿಯಿಂದಲೂ, ದಿಕ್ಕಿಲ್ಲದ ಬಡವನನ್ನು ಸೂರೆಮಾಡುವವನಿಂದಲೂ ತಪ್ಪಿಸಿ ರಕ್ಷಿಸುವಾತನೇ, “ನಿನಗೆ ಸಮಾನರು ಯಾರಿದ್ದಾರೆ?” ಎಂದು ನನ್ನ ಎಲುಬುಗಳೆಲ್ಲಾ ಹೇಳುವವು.
11 ನ್ಯಾಯವಿರುದ್ಧ ಸಾಕ್ಷಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ.
12 ಅವರು ಉಪಕಾರಕ್ಕೆ ಅಪಕಾರವನ್ನೇ ಮಾಡುತ್ತಾರೆ; ನಾನು ದಿಕ್ಕಿಲ್ಲದವನಾದೆನು.
13 ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿ ತಟ್ಟನ್ನೇ ಕಟ್ಟಿಕೊಂಡಿದ್ದೆನು; ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು. ನನ್ನ ಪ್ರಾರ್ಥನೆಯು ಕೇಳಲ್ಪಡಲಿಲ್ಲ.
14 ಅಸ್ವಸ್ಥನಾದವನನ್ನು ಸ್ನೇಹಿತನೋ, ಅಣ್ಣನೋ ಎಂದು ಭಾವಿಸಿ ನಡೆದುಕೊಂಡೆನು; ತಾಯಿ ಸತ್ತದ್ದಕ್ಕಾಗಿ ದುಃಖಿಸುವವನಂತೆ ನಾನು ತಲೆಬಾಗಿ ಅಳುತ್ತಿದ್ದೆನು.
ಕೀರ್ತ 35 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019