Text copied!
Bibles in Kannada

ಕೀರ್ತ 35:23-27 in Kannada

Help us?

ಕೀರ್ತ 35:23-27 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನನ್ನ ದೇವರೇ, ಎದ್ದು ನನಗಾಗಿ ನ್ಯಾಯವನ್ನು ನಿರ್ಣಯಿಸು; ನನ್ನ ಕರ್ತನೇ, ಎಚ್ಚೆತ್ತು ನನ್ನ ವಿವಾದವನ್ನು ವಿಚಾರಿಸು.
24 ಯೆಹೋವನೇ, ನನ್ನ ದೇವರೇ, ನಿನ್ನ ನೀತಿಗನುಸಾರವಾಗಿ ನನಗೆ ತೀರ್ಪುಕೊಡು; ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಶತ್ರುಗಳಿಗೆ ಆಸ್ಪದವಿರಬಾರದು.
25 ಆಹಾ, ನಮ್ಮ ಆಶೆ ನೆರವೇರಿತು ಅಂದುಕೊಳ್ಳುವುದಕ್ಕೆ ಅವರಿಗೆ ಅವಕಾಶವಿರಬಾರದು; ಅವನನ್ನು ಸಂಪೂರ್ಣವಾಗಿ ನಾಶಮಾಡಿಬಿಟ್ಟಿದ್ದೇವೆಂದು ಅವರು ಕೊಚ್ಚಿಕೊಳ್ಳಬಾರದು.
26 ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು, ಅವಮಾನವನ್ನೂ, ಅಪಕೀರ್ತಿಯನ್ನೂ ಹೊಂದಲಿ.
27 ನನ್ನ ನ್ಯಾಯಸ್ಥಾಪನೆಯನ್ನು ಬಯಸುವವರು ಆನಂದದೊಡನೆ ಜಯಧ್ವನಿಮಾಡಲಿ; ತನ್ನ ಸೇವಕನ ಹಿತವನ್ನು ಕೋರುವ ಯೆಹೋವನಿಗೆ ಸ್ತೋತ್ರ ಎಂದು ಯಾವಾಗಲೂ ಹೇಳುವವರಾಗಲಿ.
ಕೀರ್ತ 35 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019