Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 36

ಕೀರ್ತ 36:2-8

Help us?
Click on verse(s) to share them!
2ಅದು ಅವನನ್ನು ವಂಚಿಸಿ, “ನಿನ್ನ ದ್ರೋಹವು ಬೈಲಿಗೆ ಬರುವುದಿಲ್ಲ ಮತ್ತು ನಿನಗೆ ಕೇಡು ತರುವುದಿಲ್ಲ” ಎಂದು ಊದಿಬಿಡುತ್ತದೆ.
3ಅವನ ಬಾಯಿಂದ ಕೆಡುಕೂ, ವಂಚನೆಯೂ ಬರುತ್ತವೆ; ವಿವೇಕಮಾರ್ಗವನ್ನೂ, ಪರಹಿತವನ್ನೂ ಬಿಟ್ಟೇಬಿಟ್ಟಿದ್ದಾನೆ.
4ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ದುಷ್ಟ ಮಾರ್ಗದಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವುದಿಲ್ಲ.
5ಯೆಹೋವನೇ, ನಿನ್ನ ಪ್ರೀತಿಯು ಆಕಾಶದಷ್ಟು ಉನ್ನತವಾಗಿದೆ; ನಿನ್ನ ನಂಬಿಗಸ್ತಿಕೆಯು ಮೇಘಮಾರ್ಗವನ್ನು ಮುಟ್ಟುತ್ತದೆ.
6ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ, ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ.
7ದೇವರೇ, ನಿನ್ನ ಪ್ರೀತಿ ಎಷ್ಟೋ ಅಮೂಲ್ಯವಾದದ್ದು; ಮಾನವರು ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುತ್ತಾರೆ.
8ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ; ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ.

Read ಕೀರ್ತ 36ಕೀರ್ತ 36
Compare ಕೀರ್ತ 36:2-8ಕೀರ್ತ 36:2-8