Text copied!
Bibles in Kannada

ಕೀರ್ತ 36:4-8 in Kannada

Help us?

ಕೀರ್ತ 36:4-8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ದುಷ್ಟ ಮಾರ್ಗದಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವುದಿಲ್ಲ.
5 ಯೆಹೋವನೇ, ನಿನ್ನ ಪ್ರೀತಿಯು ಆಕಾಶದಷ್ಟು ಉನ್ನತವಾಗಿದೆ; ನಿನ್ನ ನಂಬಿಗಸ್ತಿಕೆಯು ಮೇಘಮಾರ್ಗವನ್ನು ಮುಟ್ಟುತ್ತದೆ.
6 ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ, ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ.
7 ದೇವರೇ, ನಿನ್ನ ಪ್ರೀತಿ ಎಷ್ಟೋ ಅಮೂಲ್ಯವಾದದ್ದು; ಮಾನವರು ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುತ್ತಾರೆ.
8 ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ; ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ.
ಕೀರ್ತ 36 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019