Text copied!
Bibles in Kannada

ಕೀರ್ತ 37:10-17 in Kannada

Help us?

ಕೀರ್ತ 37:10-17 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇನ್ನು ಸ್ವಲ್ಪಕಾಲದೊಳಗೆ ದುಷ್ಟನು ಕಾಣಿಸದೆ ನಿರ್ನಾಮವಾಗಿ ಹೋಗುವನು; ಅವನಿದ್ದ ಸ್ಥಳದಲ್ಲಿ ಎಷ್ಟು ವಿಚಾರಿಸಿದರೂ ಅವನು ಸಿಕ್ಕುವುದೇ ಇಲ್ಲ.
11 ಆದರೆ ದೀನರು ದೇಶವನ್ನು ಅನುಭವಿಸುವರು; ಅವರು ಮಹಾಸೌಖ್ಯದಿಂದ ಆನಂದಿಸುವರು.
12 ದುಷ್ಟನು ನೀತಿವಂತನಿಗೆ ವಿರುದ್ಧವಾಗಿ ಆಲೋಚಿಸುತ್ತಾನೆ; ಅವನನ್ನು ನೋಡಿ ಹಲ್ಲುಕಡಿಯುತ್ತಾನೆ.
13 ಆದರೆ ಕರ್ತನು ಅವನಿಗೆ ಶಿಕ್ಷಾಕಾಲ ಬರುತ್ತದೆಂದು ನಗುತ್ತಾನೆ.
14 ದುಷ್ಟರು ದೀನದರಿದ್ರರನ್ನು ಕಡಿದುಬಿಡಬೇಕೆಂದು ಕತ್ತಿಯನ್ನು ಹಿರಿದಿದ್ದಾರೆ; ಯಥಾರ್ಥರನ್ನು ಕೊಂದು ಹಾಕಬೇಕೆಂದು ಬಿಲ್ಲನ್ನು ಎತ್ತಿದ್ದಾರೆ.
15 ಆದರೆ ಅವರ ಕತ್ತಿ ಅವರ ಎದೆಯನ್ನೇ ಇರಿದುಬಿಡುವುದು; ಅವರ ಬಿಲ್ಲುಗಳು ಸಿಡಿದು ಮುರಿದುಹೋಗುವವು;
16 ದುಷ್ಟರ ಮಹಾಸಮೃದ್ಧಿಗಿಂತಲೂ ನೀತಿವಂತನ ಬಡತನವೇ ಲೇಸು.
17 ದುಷ್ಟರ ತೋಳುಗಳು ಮುರಿದುಹೋಗುವವು; ನೀತಿವಂತರನ್ನು ಯೆಹೋವನೇ ಉದ್ಧರಿಸುವನು.
ಕೀರ್ತ 37 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019