15ಆದರೆ ಅವರ ಕತ್ತಿ ಅವರ ಎದೆಯನ್ನೇ ಇರಿದುಬಿಡುವುದು; ಅವರ ಬಿಲ್ಲುಗಳು ಸಿಡಿದು ಮುರಿದುಹೋಗುವವು;
16ದುಷ್ಟರ ಮಹಾಸಮೃದ್ಧಿಗಿಂತಲೂ ನೀತಿವಂತನ ಬಡತನವೇ ಲೇಸು.
17ದುಷ್ಟರ ತೋಳುಗಳು ಮುರಿದುಹೋಗುವವು; ನೀತಿವಂತರನ್ನು ಯೆಹೋವನೇ ಉದ್ಧರಿಸುವನು.
18ಯೆಹೋವನು ನಿರ್ದೋಷಿಗಳ ಜೀವಮಾನವನ್ನು ಲಕ್ಷಿಸುತ್ತಾನೆ; ಅವರ ಸ್ವತ್ತು ಶಾಶ್ವತವಾಗಿ ನಿಲ್ಲುವುದು.
19ಅವರಿಗೆ ವಿಪತ್ಕಾಲದಲ್ಲಿಯೂ ಅಪಮಾನವಾಗುವುದಿಲ್ಲ; ಬರಗಾಲದಲ್ಲಿಯೂ ಅವರಿಗೆ ಕೊರತೆಯಿರುವುದಿಲ್ಲ.