15ಆದರೆ ಅವರ ಕತ್ತಿ ಅವರ ಎದೆಯನ್ನೇ ಇರಿದುಬಿಡುವುದು; ಅವರ ಬಿಲ್ಲುಗಳು ಸಿಡಿದು ಮುರಿದುಹೋಗುವವು;
16ದುಷ್ಟರ ಮಹಾಸಮೃದ್ಧಿಗಿಂತಲೂ ನೀತಿವಂತನ ಬಡತನವೇ ಲೇಸು.
17ದುಷ್ಟರ ತೋಳುಗಳು ಮುರಿದುಹೋಗುವವು; ನೀತಿವಂತರನ್ನು ಯೆಹೋವನೇ ಉದ್ಧರಿಸುವನು.
18ಯೆಹೋವನು ನಿರ್ದೋಷಿಗಳ ಜೀವಮಾನವನ್ನು ಲಕ್ಷಿಸುತ್ತಾನೆ; ಅವರ ಸ್ವತ್ತು ಶಾಶ್ವತವಾಗಿ ನಿಲ್ಲುವುದು.
19ಅವರಿಗೆ ವಿಪತ್ಕಾಲದಲ್ಲಿಯೂ ಅಪಮಾನವಾಗುವುದಿಲ್ಲ; ಬರಗಾಲದಲ್ಲಿಯೂ ಅವರಿಗೆ ಕೊರತೆಯಿರುವುದಿಲ್ಲ.
20ದುಷ್ಟರೋ ನಾಶವಾಗಿ ಹೋಗುವರು; ಯೆಹೋವನ ವೈರಿಗಳು ಹುಲ್ಲುಗಾವಲುಗಳ ಸೊಗಸಿನಂತಿದ್ದು ಮಾಯವಾಗುವರು. ಅವರು ಹಬೆಯಂತೆ ತೋರಿ ಅಡಗಿಹೋಗುವರು.
21ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು; ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು.
22ಯೆಹೋವನ ಆಶೀರ್ವಾದವು ಯಾರಿಗಿರುವುದೋ ಅವರು ದೇಶವನ್ನು ಅನುಭವಿಸುವರು; ಆತನ ಶಾಪವು ಯಾರಿಗಿರುವುದೋ ಅವರು ತೆಗೆದುಹಾಕಲ್ಪಡುವರು.
23ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ, ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ.
24ಅವನು ಕೆಳಗೆ ಬಿದ್ದರೂ ಏಳದೆ ಹೋಗುವುದಿಲ್ಲ; ಯೆಹೋವನು ಅವನನ್ನು ಕೈಹಿಡಿದು ಉದ್ಧಾರ ಮಾಡುವನು.
25ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ; ಈ ವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವುದನ್ನಾಗಲಿ, ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವುದನ್ನಾಗಲಿ ನೋಡಲಿಲ್ಲ.
26ಅವನು ಯಾವಾಗಲೂ ಧರ್ಮಿಷ್ಠನಾಗಿ ಹಣ ಸಹಾಯವನ್ನು ಮಾಡುತ್ತಾನೆ; ಅವನ ಸಂತತಿಯವರು ಆಶೀರ್ವಾದ ಹೊಂದುವರು.