19ಅವರಿಗೆ ವಿಪತ್ಕಾಲದಲ್ಲಿಯೂ ಅಪಮಾನವಾಗುವುದಿಲ್ಲ; ಬರಗಾಲದಲ್ಲಿಯೂ ಅವರಿಗೆ ಕೊರತೆಯಿರುವುದಿಲ್ಲ.
20ದುಷ್ಟರೋ ನಾಶವಾಗಿ ಹೋಗುವರು; ಯೆಹೋವನ ವೈರಿಗಳು ಹುಲ್ಲುಗಾವಲುಗಳ ಸೊಗಸಿನಂತಿದ್ದು ಮಾಯವಾಗುವರು. ಅವರು ಹಬೆಯಂತೆ ತೋರಿ ಅಡಗಿಹೋಗುವರು.
21ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು; ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು.
22ಯೆಹೋವನ ಆಶೀರ್ವಾದವು ಯಾರಿಗಿರುವುದೋ ಅವರು ದೇಶವನ್ನು ಅನುಭವಿಸುವರು; ಆತನ ಶಾಪವು ಯಾರಿಗಿರುವುದೋ ಅವರು ತೆಗೆದುಹಾಕಲ್ಪಡುವರು.
23ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ, ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ.