Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 37

ಕೀರ್ತ 37:20-35

Help us?
Click on verse(s) to share them!
20ದುಷ್ಟರೋ ನಾಶವಾಗಿ ಹೋಗುವರು; ಯೆಹೋವನ ವೈರಿಗಳು ಹುಲ್ಲುಗಾವಲುಗಳ ಸೊಗಸಿನಂತಿದ್ದು ಮಾಯವಾಗುವರು. ಅವರು ಹಬೆಯಂತೆ ತೋರಿ ಅಡಗಿಹೋಗುವರು.
21ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು; ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು.
22ಯೆಹೋವನ ಆಶೀರ್ವಾದವು ಯಾರಿಗಿರುವುದೋ ಅವರು ದೇಶವನ್ನು ಅನುಭವಿಸುವರು; ಆತನ ಶಾಪವು ಯಾರಿಗಿರುವುದೋ ಅವರು ತೆಗೆದುಹಾಕಲ್ಪಡುವರು.
23ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ, ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ.
24ಅವನು ಕೆಳಗೆ ಬಿದ್ದರೂ ಏಳದೆ ಹೋಗುವುದಿಲ್ಲ; ಯೆಹೋವನು ಅವನನ್ನು ಕೈಹಿಡಿದು ಉದ್ಧಾರ ಮಾಡುವನು.
25ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ; ಈ ವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವುದನ್ನಾಗಲಿ, ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವುದನ್ನಾಗಲಿ ನೋಡಲಿಲ್ಲ.
26ಅವನು ಯಾವಾಗಲೂ ಧರ್ಮಿಷ್ಠನಾಗಿ ಹಣ ಸಹಾಯವನ್ನು ಮಾಡುತ್ತಾನೆ; ಅವನ ಸಂತತಿಯವರು ಆಶೀರ್ವಾದ ಹೊಂದುವರು.
27ಕೆಟ್ಟದ್ದಕ್ಕೆ ಹೋಗದೆ ಒಳ್ಳೆಯದನ್ನೇ ಮಾಡು; ಆಗ ನೀನು ಯಾವಾಗಲೂ ದೇಶದಲ್ಲಿ ವಾಸವಾಗಿರುವಿ.
28ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು.
29ನೀತಿವಂತರೋ ದೇಶವನ್ನು ಅನುಭವಿಸುವವರಾಗಿ, ಅದರಲ್ಲಿ ಶಾಶ್ವತವಾಗಿ ವಾಸಿಸುವರು.
30ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ, ಅವನ ನಾಲಿಗೆ ನ್ಯಾಯವನ್ನೇ ಹೇಳುತ್ತದೆ.
31ದೇವರ ಧರ್ಮೋಪದೇಶವು ಅವನ ಹೃದಯದಲ್ಲಿರುವುದು; ಅವನು ಜಾರುವುದೇ ಇಲ್ಲ.
32ದುಷ್ಟನು ಹೊಂಚುಹಾಕಿ ನೀತಿವಂತನನ್ನು ಕೊಲ್ಲಬೇಕೆಂದು ಸಮಯನೋಡುತ್ತಾನೆ.
33ಆದರೆ ಯೆಹೋವನು ಅವನನ್ನು ಅವರ ಕೈಗೆ ಸಿಕ್ಕಗೊಡಿಸುವುದಿಲ್ಲ; ಅವನನ್ನು ನ್ಯಾಯವಿಚಾರಣೆಯಲ್ಲಿ ಅಪರಾಧಿಯೆಂದು ಎಣಿಸುವುದಿಲ್ಲ.
34ಯೆಹೋವನನ್ನು ನಿರೀಕ್ಷಿಸುವವನಾಗಿ ಆತನ ಮಾರ್ಗವನ್ನೇ ಅನುಸರಿಸು; ಆಗ ಆತನು ನಿನ್ನನ್ನು ಮುಂದಕ್ಕೆ ತಂದು ದೇಶವನ್ನು ಅನುಭವಿಸುವಂತೆ ಮಾಡುವನು; ದುಷ್ಟರು ತೆಗೆದುಹಾಕಲ್ಪಡುವುದನ್ನು ನೀನು ನೋಡುವಿ.
35ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸಿರಾಗಿ ಬೆಳೆದ ಮರದಂತೆ ವಿಸ್ತರಿಸಿಕೊಂಡಿರುವುದನ್ನು ನೋಡಿದ್ದೆನು.

Read ಕೀರ್ತ 37ಕೀರ್ತ 37
Compare ಕೀರ್ತ 37:20-35ಕೀರ್ತ 37:20-35