Text copied!
Bibles in Kannada

ಕೀರ್ತ 37:27-38 in Kannada

Help us?

ಕೀರ್ತ 37:27-38 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಕೆಟ್ಟದ್ದಕ್ಕೆ ಹೋಗದೆ ಒಳ್ಳೆಯದನ್ನೇ ಮಾಡು; ಆಗ ನೀನು ಯಾವಾಗಲೂ ದೇಶದಲ್ಲಿ ವಾಸವಾಗಿರುವಿ.
28 ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು.
29 ನೀತಿವಂತರೋ ದೇಶವನ್ನು ಅನುಭವಿಸುವವರಾಗಿ, ಅದರಲ್ಲಿ ಶಾಶ್ವತವಾಗಿ ವಾಸಿಸುವರು.
30 ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ, ಅವನ ನಾಲಿಗೆ ನ್ಯಾಯವನ್ನೇ ಹೇಳುತ್ತದೆ.
31 ದೇವರ ಧರ್ಮೋಪದೇಶವು ಅವನ ಹೃದಯದಲ್ಲಿರುವುದು; ಅವನು ಜಾರುವುದೇ ಇಲ್ಲ.
32 ದುಷ್ಟನು ಹೊಂಚುಹಾಕಿ ನೀತಿವಂತನನ್ನು ಕೊಲ್ಲಬೇಕೆಂದು ಸಮಯನೋಡುತ್ತಾನೆ.
33 ಆದರೆ ಯೆಹೋವನು ಅವನನ್ನು ಅವರ ಕೈಗೆ ಸಿಕ್ಕಗೊಡಿಸುವುದಿಲ್ಲ; ಅವನನ್ನು ನ್ಯಾಯವಿಚಾರಣೆಯಲ್ಲಿ ಅಪರಾಧಿಯೆಂದು ಎಣಿಸುವುದಿಲ್ಲ.
34 ಯೆಹೋವನನ್ನು ನಿರೀಕ್ಷಿಸುವವನಾಗಿ ಆತನ ಮಾರ್ಗವನ್ನೇ ಅನುಸರಿಸು; ಆಗ ಆತನು ನಿನ್ನನ್ನು ಮುಂದಕ್ಕೆ ತಂದು ದೇಶವನ್ನು ಅನುಭವಿಸುವಂತೆ ಮಾಡುವನು; ದುಷ್ಟರು ತೆಗೆದುಹಾಕಲ್ಪಡುವುದನ್ನು ನೀನು ನೋಡುವಿ.
35 ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸಿರಾಗಿ ಬೆಳೆದ ಮರದಂತೆ ವಿಸ್ತರಿಸಿಕೊಂಡಿರುವುದನ್ನು ನೋಡಿದ್ದೆನು.
36 ತರುವಾಯ ನಾನು ಆ ದಾರಿಯಲ್ಲಿ ಹೋಗಿ ನೋಡಲಾಗಿ, ಅವನು ಇಲ್ಲದೆ ಹೋಗಿದ್ದನು, ಅವನನ್ನು ಹುಡುಕಿದರೂ ಸಿಕ್ಕಲಿಲ್ಲ.
37 ಒಳ್ಳೇ ನಡತೆಯುಳ್ಳವನನ್ನು ನೋಡು, ಯಥಾರ್ಥನನ್ನು ಲಕ್ಷಿಸು; ಶಾಂತನಿಗೆ ಸಂತಾನವೃದ್ಧಿ ಆಗುವುದು.
38 ದ್ರೋಹಿಗಳೆಲ್ಲರೂ ನಾಶವಾಗುವರು; ದುಷ್ಟರ ಸಂತಾನವು ತೆಗೆದುಹಾಕಲ್ಪಡುವುದು.
ಕೀರ್ತ 37 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019