Text copied!
Bibles in Kannada

ಕೀರ್ತ 37:3-8 in Kannada

Help us?

ಕೀರ್ತ 37:3-8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.
4 ನೀನು ಯೆಹೋವನಲ್ಲಿ ಸಂತೋಷಿಸು; ಆಗ ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು.
5 ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು; ಆತನೇ ಅದನ್ನು ಸಾಗಿಸುವನು.
6 ಆತನು ನಿನ್ನ ನೀತಿಯನ್ನು ಉದಯದ ಬೆಳಕಿನಂತೆಯೂ, ನಿನ್ನ ನ್ಯಾಯವನ್ನು ಮಧ್ಯಾಹ್ನದ ತೇಜಸ್ಸಿನಂತೆಯೂ ಪ್ರಕಾಶಗೊಳಿಸುವನು.
7 ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.
8 ಕೋಪವನ್ನು ಅಡಗಿಸಿಕೋ; ರೋಷವನ್ನು ಬಿಡು. ತಳಮಳಗೊಳ್ಳಬೇಡ; ಕೆಡುಕಿಗೆ ಕಾರಣವಾದೀತು.
ಕೀರ್ತ 37 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019