5ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು; ಆತನೇ ಅದನ್ನು ಸಾಗಿಸುವನು.
6ಆತನು ನಿನ್ನ ನೀತಿಯನ್ನು ಉದಯದ ಬೆಳಕಿನಂತೆಯೂ, ನಿನ್ನ ನ್ಯಾಯವನ್ನು ಮಧ್ಯಾಹ್ನದ ತೇಜಸ್ಸಿನಂತೆಯೂ ಪ್ರಕಾಶಗೊಳಿಸುವನು.
7ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.
8ಕೋಪವನ್ನು ಅಡಗಿಸಿಕೋ; ರೋಷವನ್ನು ಬಿಡು. ತಳಮಳಗೊಳ್ಳಬೇಡ; ಕೆಡುಕಿಗೆ ಕಾರಣವಾದೀತು.
9ಕೆಡುಕರು ತೆಗೆದುಹಾಕಲ್ಪಡುವರು; ಯೆಹೋವನನ್ನು ನಿರೀಕ್ಷಿಸುವವರೇ ದೇಶವನ್ನು ಅನುಭವಿಸುವರು.
10ಇನ್ನು ಸ್ವಲ್ಪಕಾಲದೊಳಗೆ ದುಷ್ಟನು ಕಾಣಿಸದೆ ನಿರ್ನಾಮವಾಗಿ ಹೋಗುವನು; ಅವನಿದ್ದ ಸ್ಥಳದಲ್ಲಿ ಎಷ್ಟು ವಿಚಾರಿಸಿದರೂ ಅವನು ಸಿಕ್ಕುವುದೇ ಇಲ್ಲ.
11ಆದರೆ ದೀನರು ದೇಶವನ್ನು ಅನುಭವಿಸುವರು; ಅವರು ಮಹಾಸೌಖ್ಯದಿಂದ ಆನಂದಿಸುವರು.
12ದುಷ್ಟನು ನೀತಿವಂತನಿಗೆ ವಿರುದ್ಧವಾಗಿ ಆಲೋಚಿಸುತ್ತಾನೆ; ಅವನನ್ನು ನೋಡಿ ಹಲ್ಲುಕಡಿಯುತ್ತಾನೆ.
13ಆದರೆ ಕರ್ತನು ಅವನಿಗೆ ಶಿಕ್ಷಾಕಾಲ ಬರುತ್ತದೆಂದು ನಗುತ್ತಾನೆ.
14ದುಷ್ಟರು ದೀನದರಿದ್ರರನ್ನು ಕಡಿದುಬಿಡಬೇಕೆಂದು ಕತ್ತಿಯನ್ನು ಹಿರಿದಿದ್ದಾರೆ; ಯಥಾರ್ಥರನ್ನು ಕೊಂದು ಹಾಕಬೇಕೆಂದು ಬಿಲ್ಲನ್ನು ಎತ್ತಿದ್ದಾರೆ.