Text copied!
Bibles in Kannada

ಕೀರ್ತ 38:11-14 in Kannada

Help us?

ಕೀರ್ತ 38:11-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನನ್ನ ಆಪ್ತಸ್ನೇಹಿತರು ಮತ್ತು ಜೊತೆಗಾರರು, ನನ್ನ ರೋಗವನ್ನು ನೋಡಿ ಓರೆಯಾಗಿ ಹೋಗುತ್ತಾರೆ; ನನ್ನ ಬಂಧುಗಳು ದೂರ ನಿಲ್ಲುತ್ತಾರೆ.
12 ನನ್ನ ಪ್ರಾಣವನ್ನು ತೆಗೆಯಬೇಕೆನ್ನುವವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ; ನನ್ನ ವಿಪತ್ತನ್ನು ಕೋರುವವರು ನನಗೆ ನಾಶನವನ್ನೇ ನಿಶ್ಚಯಿಸಿಕೊಂಡು, ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ.
13 ನಾನಂತೂ ಕಿವುಡನಂತೆ ಕೇಳದವನಾಗಿದ್ದೇನೆ; ಮೂಕನಂತೆ ಬಾಯಿ ತೆರೆಯುವುದೇ ಇಲ್ಲ.
14 ನಾನು ಕಿವಿ ಕೇಳಿಸದವನಂತೆಯೂ, ಪ್ರತ್ಯುತ್ತರ ಕೊಡಲಾರದವನಂತೆಯೂ ಆದೆನು.
ಕೀರ್ತ 38 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019