11ನನ್ನ ಆಪ್ತಸ್ನೇಹಿತರು ಮತ್ತು ಜೊತೆಗಾರರು, ನನ್ನ ರೋಗವನ್ನು ನೋಡಿ ಓರೆಯಾಗಿ ಹೋಗುತ್ತಾರೆ; ನನ್ನ ಬಂಧುಗಳು ದೂರ ನಿಲ್ಲುತ್ತಾರೆ.
12ನನ್ನ ಪ್ರಾಣವನ್ನು ತೆಗೆಯಬೇಕೆನ್ನುವವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ; ನನ್ನ ವಿಪತ್ತನ್ನು ಕೋರುವವರು ನನಗೆ ನಾಶನವನ್ನೇ ನಿಶ್ಚಯಿಸಿಕೊಂಡು, ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ.
13ನಾನಂತೂ ಕಿವುಡನಂತೆ ಕೇಳದವನಾಗಿದ್ದೇನೆ; ಮೂಕನಂತೆ ಬಾಯಿ ತೆರೆಯುವುದೇ ಇಲ್ಲ.
14ನಾನು ಕಿವಿ ಕೇಳಿಸದವನಂತೆಯೂ, ಪ್ರತ್ಯುತ್ತರ ಕೊಡಲಾರದವನಂತೆಯೂ ಆದೆನು.
15ಯೆಹೋವನೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನನ್ನ ಕರ್ತನೇ, ನನ್ನ ದೇವರೇ, ನೀನೇ ಸದುತ್ತರವನ್ನು ಕೊಡುವವನು.
16“ನನ್ನ ವಿಷಯದಲ್ಲಿ ಶತ್ರುಗಳಿಗೆ ಸಂತೋಷವಾಗಬಾರದು; ನಾನು ಜಾರಿಬಿದ್ದರೆ ಹಿಗ್ಗಬಾರದು” ಅಂದುಕೊಂಡೆನು.
17ನನಗೆ ಆಪತ್ತೇ ಸಿದ್ಧವಾಗಿದೆ; ಯಾವಾಗಲೂ ನನಗೆ ಸಂಕಟವಿದೆ.
18ನಾನು ಅಪರಾಧಿಯೇ ಎಂದು ಒಪ್ಪಿಕೊಳ್ಳುತ್ತೇನೆ; ನನ್ನ ಪಾಪದ ದೆಸೆಯಿಂದಲೇ ನನಗೆ ವ್ಯಸನವುಂಟಾಯಿತು.
19ನನ್ನ ಶತ್ರುಗಳು ಚುರುಕಾದವರೂ, ಬಲಿಷ್ಠರೂ ಆಗಿದ್ದಾರೆ; ನನ್ನನ್ನು ಅನ್ಯಾಯವಾಗಿ ದ್ವೇಷಿಸುವವರು ಬಹು ಜನ.
20ನಾನು ಒಳ್ಳೆಯದನ್ನು ಅನುಸರಿಸುವುದರಿಂದ, ನನ್ನ ಎದುರಾಳಿಗಳು ಉಪಕಾರಕ್ಕೆ ಪ್ರತಿಯಾಗಿ ಅಪಕಾರವನ್ನೇ ಸಲ್ಲಿಸುವರು.
21ಯೆಹೋವನೇ, ಕೈ ಬಿಡಬೇಡ; ನನ್ನ ದೇವರೇ, ದೂರವಾಗಿರಬೇಡ.
22ನನ್ನ ಕರ್ತನೇ, ನನ್ನ ರಕ್ಷಕನೇ, ಬೇಗ ಬಂದು ಸಹಾಯಮಾಡು.