Text copied!
Bibles in Kannada

ಕೀರ್ತ 38:2-11 in Kannada

Help us?

ಕೀರ್ತ 38:2-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿನ್ನ ಬಾಣಗಳು ನನ್ನೊಳಗೆ ಹೊಕ್ಕಿವೆ; ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿದೆ.
3 ನಿನ್ನ ಸಿಟ್ಟಿನಿಂದ ನನ್ನ ಶರೀರದಲ್ಲಿ ಸ್ವಸ್ಥತೆ ತಪ್ಪಿ ಹೋಗಿದೆ; ನನ್ನ ಪಾಪದಿಂದ ನನ್ನ ಎಲುಬುಗಳಲ್ಲಿ ಸ್ವಲ್ಪವೂ ಕ್ಷೇಮವಿಲ್ಲ.
4 ನನ್ನ ಅಪರಾಧಗಳು ನನ್ನನ್ನು ಮುಳುಗಿಸಿಬಿಟ್ಟಿವೆ; ಅವು ಹೊರಲಾರದಷ್ಟು ಭಾರವಾದ ಹೊರೆಯಂತಿವೆ.
5 ನನ್ನ ಮೂರ್ಖತನದ ಫಲವಾದ ಬಾಸುಂಡೆಗಳು, ಕೀವು ಸೋರಿ ದುರ್ವಾಸನೆಯಿಂದ ನಾರುತ್ತಿದೆ.
6 ನಾನು ಬಹಳವಾಗಿ ಬಾಗಿ ಕುಗ್ಗಿದ್ದೇನೆ; ಯಾವಾಗಲೂ ದುಃಖದಿಂದ ವಿಕಾರಿಯಾಗಿ ಅಲೆಯುತ್ತೇನೆ.
7 ನನ್ನ ಸೊಂಟಕ್ಕೆ ಉರಿಬಡಿದಂತಿದೆ; ನನ್ನ ದೇಹದಲ್ಲಿ ಸ್ವಲ್ಪವಾದರೂ ಕ್ಷೇಮವಿಲ್ಲ.
8 ನನಗೆ ಜೋಮುಹಿಡಿದಂತಿದೆ; ಬಹಳ ಮನಗುಂದಿದವನಾದೆನು. ಹೃದಯದ ಸಂಕಟದ ದೆಸೆಯಿಂದ ಅರಚಿಕೊಳ್ಳುತ್ತಾ ಇದ್ದೇನೆ.
9 ಕರ್ತನೇ, ನನ್ನ ಅಪೇಕ್ಷೆ ನಿನಗೆ ಗೊತ್ತುಂಟು; ನನ್ನ ನಿಟ್ಟುಸಿರು ನಿನಗೆ ಮರೆಯಾಗಿಲ್ಲ.
10 ನನ್ನ ಹೃದಯವು ಬಡಿದುಕೊಳ್ಳುತ್ತಿದೆ; ನನ್ನ ಚೈತನ್ಯವು ಕುಗ್ಗಿಹೋಯಿತು; ನನ್ನ ಕಣ್ಣುಗಳೂ ಮೊಬ್ಬಾಗಿ ಹೋದವು.
11 ನನ್ನ ಆಪ್ತಸ್ನೇಹಿತರು ಮತ್ತು ಜೊತೆಗಾರರು, ನನ್ನ ರೋಗವನ್ನು ನೋಡಿ ಓರೆಯಾಗಿ ಹೋಗುತ್ತಾರೆ; ನನ್ನ ಬಂಧುಗಳು ದೂರ ನಿಲ್ಲುತ್ತಾರೆ.
ಕೀರ್ತ 38 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019