Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 39

ಕೀರ್ತ 39:1-6

Help us?
Click on verse(s) to share them!
1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದೂತೂನನ ರಾಗದ ಪ್ರಕಾರ ಹಾಡತಕ್ಕದ್ದು; ದಾವೀದನ ಕೀರ್ತನೆ. “ನನ್ನ ನಾಲಿಗೆ ಪಾಪಕ್ಕೆ ಹೋಗದಂತೆ ಜಾಗರೂಕನಾಗಿರುವೆನು, ದುಷ್ಟರು ನನ್ನ ಮುಂದೆ ಇರುವಾಗ ಬಾಯಿಗೆ ಕಡಿವಾಣ ಹಾಕಿಕೊಂಡಿರುವೆನು” ಅಂದುಕೊಂಡೆನು.
2ನಾನು ಮೌನವಾಗಿದ್ದೆನು; ಒಳ್ಳೆಯದನ್ನಾದರೂ ಆಡದೆ ಸುಮ್ಮನಿದ್ದೆನು; ಆದರೆ ನನ್ನ ಸಂಕಟವು ಹೆಚ್ಚಿತು.
3ನನ್ನ ಹೃದಯವು ಆತಂಕದಿಂದ ಕೂಡಿತ್ತು; ನಾನು ಹೆಚ್ಚಾಗಿ ಯೋಚಿಸುತ್ತಿರುವಲ್ಲಿ ತಾಪ ಹೆಚ್ಚಿತು. ಆಗ ನಾನು ಬಾಯಿ ಬಿಟ್ಟು,
4“ಯೆಹೋವನೇ, ನನಗೆ ಅವಸಾನವುಂಟೆಂದೂ, ನನ್ನ ಜೀವಮಾನವು ಅತ್ಯಲ್ಪವೆಂದೂ, ನಾನು ಎಷ್ಟೋ ಅಸ್ಥಿರನೆಂದೂ ನನಗೆ ತಿಳಿಯಪಡಿಸು.
5ನನ್ನ ಆಯುಷನ್ನು ಗೇಣುದ್ದವಾಗಿ ಮಾಡಿದ್ದೀಯಲ್ಲಾ; ನನ್ನ ಜೀವಿತಕಾಲ ನಿನ್ನ ಎಣಿಕೆಯಲ್ಲಿ ಏನೂ ಅಲ್ಲ” ಅಂದೆನು. ಮನುಷ್ಯನೆಂಬವನು ಎಷ್ಟು ಸ್ಥಿರನೆಂದು ಕಂಡರೂ ಬರಿ ಉಸಿರೇ. ಸೆಲಾ
6ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು; ಅವರು ಸುಮ್ಮಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವುದೋ ತಾವೇ ತಿಳಿಯರು.

Read ಕೀರ್ತ 39ಕೀರ್ತ 39
Compare ಕೀರ್ತ 39:1-6ಕೀರ್ತ 39:1-6