Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 39

ಕೀರ್ತ 39:7-12

Help us?
Click on verse(s) to share them!
7“ಹೀಗಿರಲಾಗಿ ಕರ್ತನೇ, ನಾನು ಇನ್ನು ಯಾವುದಕ್ಕೆ ಕಾದುಕೊಳ್ಳಲಿ? ನೀನೇ ನನ್ನ ನಿರೀಕ್ಷೆ.
8ಎಲ್ಲಾ ದ್ರೋಹಗಳಿಂದ ನನ್ನನ್ನು ಬಿಡುಗಡೆಮಾಡು; ಮೂರ್ಖರ ನಿಂದೆಗೆ ಗುರಿಮಾಡಬೇಡ.
9ನೀನೇ ಇದನ್ನು ಬರಮಾಡಿದ್ದರಿಂದ ನಾನು ಏನೂ ಹೇಳದೆ ಮೌನವಾಗಿರುವೆನು.
10ನಿನ್ನ ದಂಡನೆಯನ್ನು ತೊಲಗಿಸು; ನಿನ್ನ ಕೈಹೊಡೆತದಿಂದ ಸಾಯುವ ಹಾಗಿದ್ದೇನಲ್ಲಾ.
11ನೀನು ನರನನ್ನು ಪಾಪದ ನಿಮಿತ್ತ ಗದರಿಸಿ ಶಿಕ್ಷಿಸುವಾಗ, ಅವನ ಚೆಲುವಿಕೆಯು ನುಸಿ ಹತ್ತಿತೋ ಎಂಬಂತೆ ಹಾಳಾಗಿ ಹೋಗುತ್ತದೆ. ಮನುಷ್ಯನೆಂಬವನು ಬರಿ ಉಸಿರೇ. ಸೆಲಾ
12ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ. ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ, ಪರದೇಶದವನೂ ಆಗಿದ್ದೇನಲ್ಲಾ.

Read ಕೀರ್ತ 39ಕೀರ್ತ 39
Compare ಕೀರ್ತ 39:7-12ಕೀರ್ತ 39:7-12