Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 40

ಕೀರ್ತ 40:5-12

Help us?
Click on verse(s) to share them!
5ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ, ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯ; ಅವು ಅಸಂಖ್ಯಾತವಾಗಿವೆ.
6ಯಜ್ಞನೈವೇದ್ಯಗಳು ನಿನಗೆ ಇಷ್ಟವಿಲ್ಲ; ಸರ್ವಾಂಗಹೋಮಗಳನ್ನಾಗಲಿ, ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ.
7ಆಗ ನಾನು, “ಇಗೋ ಇದ್ದೇನೆ; ನನ್ನ ಕರ್ತವ್ಯವು ಗ್ರಂಥದ ಸುರುಳಿಯಲ್ಲಿ ಬರೆದದೆ.
8ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ” ಅಂದೆನು.
9ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು, ಧಾರಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು; ಯೆಹೋವನೇ, ನೀನೇ ಬಲ್ಲೆ.
10ನಿನ್ನ ನೀತಿಸಾಧನೆಯನ್ನು ಮರೆಮಾಡಲಿಲ್ಲ; ನಿನ್ನ ನಂಬಿಕೆಯನ್ನೂ, ರಕ್ಷಣೆಯನ್ನೂ ಪ್ರಸಿದ್ಧಪಡಿಸಿದೆನು; ನಿನ್ನ ಕೃಪಾಸತ್ಯತೆಗಳನ್ನು ಮಹಾಸಮುದಾಯದಲ್ಲಿ ತಿಳಿಸದೆ ಇರಲಿಲ್ಲ.
11ಯೆಹೋವನೇ, ನೀನಂತೂ ನಿನ್ನ ಕರುಣೆಯನ್ನು ನನ್ನಿಂದ ಅಗಲಿಸಬೇಡ; ನಿನ್ನ ಕೃಪಾಸತ್ಯತೆಗಳು ನನ್ನನ್ನು ಯಾವಾಗಲೂ ಕಾಪಾಡಲಿ.
12ಏಕೆಂದರೆ ಲೆಕ್ಕವಿಲ್ಲದ ಆಪತ್ತುಗಳು ನನ್ನನ್ನು ಸುತ್ತಿಕೊಂಡಿವೆ; ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿರುತ್ತವೆ, ನನಗೆ ದಿಕ್ಕೇ ತೋರುವುದಿಲ್ಲ. ಅವು ನನ್ನ ತಲೆಯ ಕೂದಲುಗಳಿಗಿಂತಲೂ ಹೆಚ್ಚಾಗಿವೆ, ನಾನು ಎದೆಗುಂದಿ ಹೋದೆನು.

Read ಕೀರ್ತ 40ಕೀರ್ತ 40
Compare ಕೀರ್ತ 40:5-12ಕೀರ್ತ 40:5-12