Text copied!
Bibles in Kannada

ಕೀರ್ತ 40:5-12 in Kannada

Help us?

ಕೀರ್ತ 40:5-12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ, ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯ; ಅವು ಅಸಂಖ್ಯಾತವಾಗಿವೆ.
6 ಯಜ್ಞನೈವೇದ್ಯಗಳು ನಿನಗೆ ಇಷ್ಟವಿಲ್ಲ; ಸರ್ವಾಂಗಹೋಮಗಳನ್ನಾಗಲಿ, ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ.
7 ಆಗ ನಾನು, “ಇಗೋ ಇದ್ದೇನೆ; ನನ್ನ ಕರ್ತವ್ಯವು ಗ್ರಂಥದ ಸುರುಳಿಯಲ್ಲಿ ಬರೆದದೆ.
8 ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ” ಅಂದೆನು.
9 ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು, ಧಾರಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು; ಯೆಹೋವನೇ, ನೀನೇ ಬಲ್ಲೆ.
10 ನಿನ್ನ ನೀತಿಸಾಧನೆಯನ್ನು ಮರೆಮಾಡಲಿಲ್ಲ; ನಿನ್ನ ನಂಬಿಕೆಯನ್ನೂ, ರಕ್ಷಣೆಯನ್ನೂ ಪ್ರಸಿದ್ಧಪಡಿಸಿದೆನು; ನಿನ್ನ ಕೃಪಾಸತ್ಯತೆಗಳನ್ನು ಮಹಾಸಮುದಾಯದಲ್ಲಿ ತಿಳಿಸದೆ ಇರಲಿಲ್ಲ.
11 ಯೆಹೋವನೇ, ನೀನಂತೂ ನಿನ್ನ ಕರುಣೆಯನ್ನು ನನ್ನಿಂದ ಅಗಲಿಸಬೇಡ; ನಿನ್ನ ಕೃಪಾಸತ್ಯತೆಗಳು ನನ್ನನ್ನು ಯಾವಾಗಲೂ ಕಾಪಾಡಲಿ.
12 ಏಕೆಂದರೆ ಲೆಕ್ಕವಿಲ್ಲದ ಆಪತ್ತುಗಳು ನನ್ನನ್ನು ಸುತ್ತಿಕೊಂಡಿವೆ; ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿರುತ್ತವೆ, ನನಗೆ ದಿಕ್ಕೇ ತೋರುವುದಿಲ್ಲ. ಅವು ನನ್ನ ತಲೆಯ ಕೂದಲುಗಳಿಗಿಂತಲೂ ಹೆಚ್ಚಾಗಿವೆ, ನಾನು ಎದೆಗುಂದಿ ಹೋದೆನು.
ಕೀರ್ತ 40 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019